ಅರಣ್ಯ, ಜಲ ಸಂರಕ್ಷಣೆ ಅಗತ್ಯ: ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೊ ಸಲಹೆ

New Project (17)
Published on

ಬೆಳ್ತಂಗಡಿ: ಅರಣ್ಯ, ನದಿ, ಪರಿಸರ ಸಂರಕ್ಷಣೆ ನಾಗರಿಕರ ಸಾಂವಿಧಾನಿಕ ಕರ್ತವ್ಯವಾಗಿದ್ದು, ನೀರನ್ನು ಹಿಡಿದಿಟ್ಟುಕೊಂಡು ಅಂತರ್ಜಲ ವರ್ಧಿಸುವ ಬಗ್ಗೆ ಆಲೋಚಿಸುವುದು ಅಗತ್ಯ ಎಂದು ಮಂಗಳೂರು ಉಪವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೊ ಹೇಳಿದರು.

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ಬೆಳ್ತಂಗಡಿ ರೋಟರಿ ಕ್ಲಬ್ ಹಾಗೂ ಉಜಿರೆಯ ಬದುಕು ಕಟ್ಟೋಣ ಬನ್ನಿ ತಂಡದ ಸಹಯೋಗದಲ್ಲಿ ಆಯೋಜಿಸಿದ್ದ ಸಾವಿರ ಸಸಿ ವಿತರಣೆ ಕಾರ್ಯಕ್ರಮ ‘ಹಸಿರೇ ಉಸಿರು’ ಉದ್ಘಾಟಿಸಿ ಮಾತನಾಡಿದರು.

ಎಸ್‌ಡಿಎಂ ಎಜುಕೇಶನಲ್ ಸೊಸೈಟಿ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್., ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು, ಬದುಕು ಕಟ್ಟೋಣ ಬನ್ನಿ ತಂಡ ಸಂಚಾಲಕ ಮೋಹನ್ ಕುಮಾರ್ ಕೆ., ಎನ್ನೆಸ್ಸೆಸ್ ಯೋಜನಾಧಿಕಾರಿ ಡಾ.ಮಹೇಶ್ ಕುಮಾರ್ ಶೆಟ್ಟಿ ಎಚ್. ಶುಭಹಾರೈಸಿದರು. ಎಸ್‌ಡಿಎಂ ಕಾಲೇಜು ಪ್ರಾಂಶುಪಾಲ ಡಾ.ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆವರಣದಲ್ಲಿ ಗಿಡ ನೆಡಲಾಯಿತು. ಬೆಳ್ತಂಗಡಿ ಉಪ ವಲಯ ಅರಣ್ಯಾಧಿಕಾರಿ ಕಿರಣ್ ಪಾಟೀಲ್ ಮೊದಲಾದವರಿದ್ದರು. ಸ್ವಯಂಸೇವಕಿ ಶ್ರೇಜಾ ಅತಿಥಿ ಪರಿಚಯ ನೀಡಿದರು. ಸ್ವಯಂಸೇವಕಿ ಸನುಷಾ ಪಿಂಟೊ ಮತ್ತು ಮಾನ್ಯಾ ಕೆ.ಆರ್. ನಿರೂಪಿಸಿದರು. ಯೋಜನಾಧಿಕಾರಿ ಮಾಲಿನಿ ಅಂಚನ್ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net