More

    ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಶಾ ಇನ್ನಿಲ್ಲ

    ಬೆಂಗಳೂರು; ಭಾರತದ ಅತಿದೊಡ್ಡ ಪುಸ್ತಕ ಮಳಿಗೆ ಎಂದೇ ಹೆಸರಾದ ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಸಿ ಶಾ ಅವರು ಮಂಗಳವಾರ ಮಧ್ಯಾಹ್ನ 2.15ಕ್ಕೆ ನಿಧನ ಹೊಂದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

    ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶೇಷಾದ್ರಿಪುರದ ಸಾಗರ್ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

    1966ರಲ್ಲಿ ಪುಟ್ಟದಾಗಿ ಸಪ್ನಾ ಬುಕ್ ಹೌಸ್ ಆರಂಭಿಸಿದ ಸುರೇಶ್ ಸಿ, ಷಾ ಅವರು ಸಂಸ್ಥೆಯನ್ನು ಆಮೂಲಾಗ್ರವಾಗಿ ಬೆಳೆಸಿದರು. ಈಗ ಅದು ಭಾರತದ ಅತಿದೊಡ್ಡ ಪುಸ್ತಕ ಮಳಿಗೆ ಎಂದೇ ಹೆಸರಾಗಿದೆ. 19 ಶಾಖೆಗಳನ್ನು ಹೊಂದಿರುವ ಸಪ್ನಾ ಕನ್ನಡ ಪುಸ್ತಕಗಳನ್ನು ವ್ಯಾಪಕವಾಗಿ ಓದುಗರಿಗೆ ತಲುಪಿಸುವ ಕೆಲಸವನ್ನು ಸತತವಾಗಿ ಮಾಡಿಕೊಂಡು ಬರುತ್ತಿದೆ.

    ಸುರೇಶ್ ಸಿ ಶಾ ಅವರು ಮೂವರು ಪುತ್ರರಾದ ನಿತಿನ್ ಶಾ, ದೀಪಕ್ ಶಾ ಮತ್ತು ಪರೇಶ್ ಶಾ ಅವರನ್ನು ಅಗಲಿದ್ದಾರೆ. ಬುಧವಾರ ಬೆಳಗ್ಗೆ ಹರಿಶ್ಚಂದ್ರ ಘಾಟ್ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಸಪ್ನಾದ ಪ್ರಕಟಣೆ ತಿಳಿಸಿದೆ.

    ಇದನ್ನೂ ಓದಿ; ದೇವರು ಲ್ಯಾಂಬೊರ್ಗಿನಿ ಕಾರು ಕೊಡುತ್ತಾನೆ ಅಂತ ದಿನಗಟ್ಟಲೆ ಉಗ್ರ ಉಪವಾಸ ಮಾಡಿದ; ಎಲ್ಲ ಗರ್ಲ್​ಫ್ರೆಂಡ್​ಗಾಗಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts