More

    ರಾಜ್ಯಾದ್ಯಂತ ಸಪ್ತಪದಿ ಯೋಜನೆ ಯಶಸ್ವಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

    ಬೆಂಗಳೂರು ಗ್ರಾಮಾಂತರ: ರಾಜ್ಯಾದ್ಯಂತ ಸಪ್ತಪದಿ ಯೋಜನೆ ಯಶಸ್ವಿಯಾಗಿ ನೆರವೇರುತ್ತಿದೆ. ಸರಳ ವಿವಾಹದಲ್ಲಿ ಹೆಚ್ಚು ಮಂದಿ ಪಾಲ್ಗೊಳ್ಳುತ್ತಿದ್ದಾರೆ. ಕರೊನಾ ಕಾರಣದಿಂದ ಸರಳ ವಿವಾಹ ವಿಳಂಬವಾಗಿ ನಡೆದಿದ್ದು, ಮುಂದೆ ಪ್ರತೀ ತಿಂಗಳು ದೇವಾಲಯಗಳಲ್ಲಿ ನೆರವೇರಲಿವೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

    ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ಧಾರ್ವಿುಕ ದತ್ತಿ ಇಲಾಖೆ ಗುರುವಾರ ಆಯೋಜಿಸಿದ್ದ ಉಚಿತ ಸಾಮೂಹಿಕ ಸರಳ ವಿವಾಹ ‘ಸಪ್ತಪದಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಸುಬ್ರಹ್ಮಣ್ಯ ಸ್ವಾಮಿ ಸನ್ನಿಧಿಯಲ್ಲಿ ವಿವಾಹ ನಡೆಯುತ್ತಿರುವುದರಿಂದ ನವ ಜೋಡಿಗಳಿಗೆ ದೇವರ ಅನುಗ್ರಹ ಸಿಗುವಂತಾಗಲಿ ಎಂದು ಹಾರೈಸಿದರು.

    ಕೋವಿಡ್ ಸಂಕಷ್ಟದ ನಡುವೆಯೂ ಸಿಎಂ ಬಿ.ಎಸ್.ಯಡಿಯೂರಪ್ಪ ಉತ್ತಮ ಬಜೆಟ್ ಮಂಡಿಸಲಿದ್ದಾರೆ. ದೇವಾಲಯಗಳ ಅಭಿವೃದ್ಧಿ ಹಾಗೂ ಟ್ರಸ್ಟಿಗಳ ಸಂಖ್ಯೆ ಹೆಚ್ಚಿಸಲು ಸಿಎಂಗೆ ಮನವಿ ಮಾಡಿಕೊಳ್ಳಲಾಗಿದೆ. ಬಜೆಟ್​ನಲ್ಲಿ ಈ ಬಗ್ಗೆ ಘೋಷಣೆಯಾಗುವ ನಿರೀಕ್ಷೆ ಇದೆ ಎಂದರು.

    55 ಸಾವಿರ ರೂ. ಪ್ರೋತ್ಸಾಹಧನ: ಕಾರ್ಯಕ್ರಮದಲ್ಲಿ 47 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿರಿಸಿದವು. ವರನ ಹೂವಿನ ಹಾರಕ್ಕೆ ರೂ.5 ಸಾವಿರ ರೂ., ವಧುವಿಗೆ ವಸ್ತ್ರ ಮತ್ತು ಹೂವಿನ ಹಾರಕ್ಕೆ 10 ಸಾವಿರ ರೂ. ಹಾಗೂ 40 ಸಾವಿರ ರೂ.ಮೌಲ್ಯದ ಚಿನ್ನದ ತಾಳಿ, ಎರಡು ಚಿನ್ನದ ಗುಂಡು ಸೇರಿ ವಧು-ವರರಿಗೆ 55 ಸಾವಿರ ರೂ. ಪೋ›ತ್ಸಾಹಧನ ನೀಡಲಾಗುತ್ತಿದೆ ಎಂದು ತಿಳಿಸಿದರು.

    ಆರ್ಟ್ ಆಫ್ ಲಿವಿಂಗ್​ನ ರವಿಶಂಕರ ಗುರೂಜಿ ಮಾತನಾಡಿದರು. ಶಾಸಕರಾದ ಟಿ.ವೆಂಕಟರಮಣಯ್ಯ, ನಿಸರ್ಗ ನಾರಾಯಣಸ್ವಾಮಿ, ಡಾ. ಶ್ರೀನಿವಾಸಮೂರ್ತಿ, ಆನಂದ ಗುರೂಜಿ, ಜಿಪಂ ಸದಸ್ಯ ಎಚ್.ಅಪ್ಪಯ್ಯಣ್ಣ, ಮುಜರಾಯಿ ಇಲಾಖೆ ಆಯುಕ್ತ ಕೆ.ಎ. ದಯಾನಂದ, ಡಿಸಿ ಕೆ.ಶ್ರೀನಿವಾಸ್, ಜಿಪಂ ಉಪ ಕಾರ್ಯದರ್ಶಿ ಕರಿಯಪ್ಪ, ಎಸಿ ಅರುಳ್ ಕುಮಾರ್, ತಹಸೀಲ್ದಾರ್ ಶಿವರಾಜ್, ಮುಜರಾಯಿ ಇಲಾಖೆ ತಹಸೀಲ್ದಾರ್ ಹೇಮಲತಾ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts