21 C
Bengaluru
Thursday, January 23, 2020

PHOTOS| ಬರೋಬ್ಬರಿ 96 ಕೆ.ಜಿ. ತೂಕವಿದ್ದ ಈ ನಟಿ ಈಗ ಬಾಲಿವುಡ್​ನ ಗ್ಲಾಮರಸ್​ ಬ್ಯೂಟಿ: ಯಾರೆಂದು ಹೇಳಬಲ್ಲಿರಾ?

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ಮುಂಬೈ: ಬಾಲಿವುಡ್​ ಚಿತ್ರರಂಗದಲ್ಲಿ ಭರವಸೆಯ ನಟಿಯಾಗಿ ಮಿಂಚುತ್ತಿರುವ ಸಾರಾ ಅಲಿ ಖಾನ್​ ತಾವೂ ಚಿತ್ರರಂಗಕ್ಕೆ ಬರುವ ಮುನ್ನಾ ಭಾರಿ ತೂಕ ಹೊಂದಿದ್ದರು ಎಂಬುದಕ್ಕೆ ಅವರು ಶೇರ್​ ಮಾಡಿಕೊಂಡಿರುವ ಫೋಟೊ ಸಾಕ್ಷಿಯಾಗಿದೆ. ಸದ್ಯ ಗ್ಲಾಮರಸ್​ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಹಾಟ್​ ಬ್ಯೂಟಿ ಈ ಮುಂಚೆ ಇದ್ದ ತೂಕವನ್ನು ಇಳಿಸಿಕೊಂಡಿರುವುದು ನಿಜಕ್ಕೂ ಅಚ್ಚರಿಯನ್ನುಂಟು ಮಾಡುವಂತಿದೆ.

ತಾಯಿ ಅಮೃತ ಸಿಂಗ್​ ಜತೆಯಲ್ಲಿ ತೆಗೆದುಕೊಂಡಿರುವ ಫೋಟೋವನ್ನು ಸಾರಾ ತಮ್ಮ ಇನ್​ಸ್ಟಾಗ್ರಾಂನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಇಬ್ಬರೂ ಕಪ್ಪು ಬಣ್ಣದ ಧಿರಿಸನ್ನು ಧರಿಸಿದ್ದಾರೆ. ‘ನನ್ನನ್ನು ಎಸೆಯಲು ಸಾಧ್ಯವಾಗದಿದ್ದಾಗ’ ಎಂದು ಹಿಂದಿನ ದಿನಗಳನ್ನು ನೆನಪು ಮಾಡಿಕೊಂಡು, ಕಪ್ಪು ಬಣ್ಣದ ಸೌಂದರ್ಯ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಲವ್​ ಆಜ್​ ಕಲ್​ ಚಿತ್ರದ ಸಹನಟ ಹಾಗೂ ಇವರ ಬಾಯ್​ಫ್ರೆಂಡ್ ಎಂದು ಸುದ್ದಿಯಾಗಿದ್ದ ಕಾರ್ತಿಕ್​ ಆರ್ಯನ್, ಈ ಹುಡುಗಿ ಸೋಡಲು ಸಾರಾ ಅಲಿ ರೀತಿ ಇದ್ದಾಳೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಕಾರ್ತಿಕ್​ ಅಲ್ಲದೆ, ಸಾರಾ ಅಭಿಮಾನಿಗಳು ನಟಿ ಫೋಟೊ ನೋಡಿ ಅಚ್ಚರಿಗೊಂಡಿದ್ದು, ನಿಮ್ಮ ದೇಹ ರೂಪಾಂತರದ ಗುಟ್ಟೇನು ಎಂದು ಒಬ್ಬ ಅಭಿಮಾನಿ ಪ್ರಶ್ನಿಸಿದ್ದಾನೆ. ಅಲ್ಲದೆ, ಎಷ್ಟು ಹಣ ಹಾಗೂ ಸಮಯವನ್ನು ವ್ಯಯಿಸಿದ್ದೀರಿ? ಎಷ್ಟು ಪ್ರಯತ್ನ ಪಟ್ಟಿದ್ದೀರಿ ಎಂದು ಕೇಳಿದ್ದಾನೆ. ಇದಕ್ಕೆ ಸಾರಾ, ತುಂಬಾ ಧೈರ್ಯ ತೆಗೆದುಕೊಂಡು ಮಾಡಿದರೆ ಎಲ್ಲವೂ ಸಾಧ್ಯವಾಗುತ್ತದೆ ಎಂದು ಉತ್ತರ ನೀಡಿದ್ದಾರೆ.

ಬಾಲಿವುಡ್​ ಪ್ರವೇಶಿಸುವ ಮುನ್ನ ಸಾರಾ ಅಂದಾಜು 96 ಕೆ.ಜಿ. ಇದ್ದರಂತೆ. ನಟ ಸುಶಾಂತ್​ ಸಿಂಗ್​ ರಜಪೂತ್​ ಅಭಿನಯದ ಕೇದರ್​ನಾಥ್​ ಚಿತ್ರದ ಮೂಲಕ ಸಾರಾ ಚಿತ್ರರಂಗ ಪ್ರವೇಶ ಮಾಡಿದರು. ಸಾರಾ ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ ಕಾಯಿಲೆಯ ವಿರುದ್ಧ ಹೋರಾಟ ನಡೆಸಿದ್ದರ ಬಗ್ಗೆ ಬಿಬಿಸಿ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ನಾನು ನಾಲ್ಕು ವರ್ಷ ಅಧ್ಯಯನಕ್ಕೆಂದು ಕೊಲಂಬಿಯಾಕ್ಕೆ ಹೋಗಿದ್ದೆ. ಎರಡು ವರ್ಷದ ನಂತರ ನಾನು ನಟನೆ ಮಾಡಲು ನಿರ್ಧರಿಸಿದ್ದೆ. ಆದರೆ, ನನ್ನ ತೂಕ ನೋಡಿದಾಗ ನಾನು 96 ಕೆ.ಜಿ ಇರುವುದು ತಿಳಿಯಿತು. ಇದರಿಂದ ತುಂಬಾ ಕಷ್ಟವಾಯಿತು. ಕೊನೆಯ ವರ್ಷದ ಅಧ್ಯಯನ ವೇಳೆ ನಾನು ತೂಕವನ್ನು ಕಳೆದುಕೊಂಡೆ. ಈ ವೇಳೆ ತುಂಬಾ ಶ್ರಮವಹಿಸಿದೆ ಎಂದು ಹೇಳಿಕೊಂಡಿದ್ದಾರೆ.

ಸಾರಾ ಅಲಿ ಖಾನ್​, ನಟ ಸೈಫ್​ ಅಲಿಖಾನ್​ ಅವರ ಮೊದಲ ಪತ್ನಿ ಅಮೃತ ಸಿಂಗ್​ ಮಗಳಾಗಿದ್ದು, ತಂದೆ ಸೈಫ್​ ಜತೆಯಲ್ಲಿಯೂ ಸಂಪರ್ಕದಲ್ಲಿದ್ದಾರೆ. ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದರು. ಸದ್ಯ ಲವ್​ ಆಜ್​ ಕಲ್ ಸೀಕ್ವೆಲ್​ ಚಿತ್ರವನ್ನು ಸಾರಾ ಮುಗಿಸಿದ್ದು, ವರುಣ್​ ಧವನ್​ ಅಭಿನಯದ ಕೂಲಿ ನಂ.1 ಚಿತ್ರದ ಶೂಟಿಂಗ್​ನಲ್ಲಿ ತೊಡಗಿಸಿಕೊಂಡಿದ್ದಾರೆ. (ಏಜೆನ್ಸೀಸ್​)

View this post on Instagram

??☠️

A post shared by Sara Ali Khan (@saraalikhan95) on

View this post on Instagram

???? @tbz1864

A post shared by Sara Ali Khan (@saraalikhan95) on

View this post on Instagram

Don’t be eye candy, be soul food ???

A post shared by Sara Ali Khan (@saraalikhan95) on

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...