More

    ಉಜ್ಜಯಿನಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಸಾರಾ ಅಲಿ ಖಾನ್‌; ಇಲ್ಲಿವೆ ನೋಡಿ ಫೋಟೋಗಳು…

    ಭೋಪಾಲ್: ಬಾಲಿವುಡ್ ನಟಿ ಸಾರಾ ಅಲಿ ಖಾನ್ ಇಂದು ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಗರ್ಭಗುಡಿಯ ಮುಂದೆ ಕೆಲ ಕಾಲ ಕುಳಿತು ಧ್ಯಾನ ಮಾಡಿದ್ದು, ಬಳಿಕ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

    ವಿಕ್ಕಿ ಕೌಶಲ್ ಮತ್ತು ಸಾರಾ ನಟನೆಯ ‘ಝರಾ ಹಟ್ಕೆ ಝರಾ ಬಚ್ಕೆ’ ಸಿನಿಮಾ ಬಿಡುಗಡೆ ಬೆನ್ನಲ್ಲೇ ನಟಿ ದೇವರ ಸನ್ನಿಧಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸದ್ಯ ಸಾರಾ ಅಲಿಖಾನ್ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಪ್ರಾರ್ಥಿಸುತ್ತಿರುವ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

    ಬಾಲಿವುಡ್ ನಟ ಸೈಫ್ ಅಲಿ ಖಾನ್ ಪುತ್ರಿ ಸಾರಾ ಈ ಹಿಂದೆಯೂ ಹಿಂದು ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಕೆಲ ದಿನಗಳ ಹಿಂದೆ ಪುಣ್ಯಕ್ಷೇತ್ರವಾದ ಕೇದಾರನಾಥಕ್ಕೆ ತೆರಳಿದ್ದರು. ಇದೀಗ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಆಗಮಿಸಿದ್ದಾರೆ.

    ಸಾರಾ ಅಲಿ ಖಾನ್ ಮಹಾಕಾಳೇಶ್ವರ ದೇವರ ಸನ್ನಿಧಿಗೆ ಆಗಸಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ಕಾವು ಏರಿದೆ. ಹಿಂದು ದೇವಾಲಯಕ್ಕೆ ಭೇಟಿ ನೀಡಿರುವುದು ತಮ್ಮ ಸಿನಿಮಾದ ಪ್ರಚಾರದ ಗಿಮಿಕ್ ಎಂದು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಮಾಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts