More

  ದೇಗುಲ ನಿರ್ಮಾಣಕ್ಕೆ ಶಂಕುಸ್ಥಾಪನೆ

  ಸರಗೂರು: ಪಟ್ಟಣದ ಶ್ರೀ ಶಂಭುಲಿಂಗೇಶ್ವರಸ್ವಾಮಿ ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ಮಂಗಳವಾರ ಶಾಸಕ ಅನಿಲ್ ಚಿಕ್ಕಮಾದು ಶಂಕುಸ್ಥಾಪನೆ ನೆರವೇರಿಸಿದರು.

  ಬಳಿಕ ಮಾತನಾಡಿದ ಅವರು, ಹಿರಿಯರು ಸ್ಥಾಪಿಸಿದ ದೇವಾಲಯಗಳಲ್ಲಿ ಇಂದಿನ ಯುವ ಪೀಳಿಗೆಯವರು ಧಾರ್ಮಿಕ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.

  ಆದಿಕರ್ನಾಟಕ ಸಮಾಜದ ಯಜಮಾನ ಎಸ್.ಎಲ್.ರಾಜಣ್ಣ ಮಾತನಾಡಿ, ಶಂಭುಲಿಂಗೇಶ್ವರ ದೇವಸ್ಥಾನವು ನಾಲ್ಕು ತಲೆಮಾರಿನ ಹಿಂದೆ ನಿರ್ಮಾಣವಾಗಿದ್ದು, ಶಿಥಿಲಗೊಂಡು ನೆರೆ ಹಾವಳಿ ಸಂದರ್ಭದಲ್ಲಿ ಬಿದ್ದುಹೋಗಿದೆ. ಈ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಲು ಗ್ರಾಮಸ್ಥರು ಮುಂದಾಗಿದ್ದು, ಶಾಸಕರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಅನುದಾನ ನೀಡಬೇಕೆಂದು ಕೋರಿದರು.

  ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಯೋಗೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಿಕ್ಕವೀರನಾಯಕ, ಬಿ.ಸಿ.ಬಸಪ್ಪ, ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ಶಿವನಂಜ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಣ್ಣ ಇತರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts