

ಹೆಬ್ರಿ: ಭಾರತೀಯ ಸಂಸ್ಕೃತಿಯಲ್ಲಿ ಹದಿನಾರು ಸಂಸ್ಕಾರಗಳು ವ್ಯಕ್ತಿಯ ಪರಿಪೂರ್ಣತೆ ಇದೆ. ಅದರಲ್ಲಿ ಅಕ್ಷರಾಭ್ಯಾಸ ಸಂಸ್ಕಾರ ವ್ಯಕ್ತಿಯ ಬುದ್ಧಿಶಕ್ತಿ, ಪ್ರಜ್ಞಾಶಕ್ತಿ, ವಿದ್ಯಾಶಕ್ತಿಯ ಅಭಿವೃದ್ಧಿಗೆ ಪೂರಕವಾದದ್ದು ಎಂದು ಸಂಸ್ಥೆ ಸಂಸ್ಕೃತ ಶಿಕ್ಷಕ ವೇದವ್ಯಾಸ ತಂತ್ರಿ ಮಡಾಮಕ್ಕಿ ಹೇಳಿದರು.
ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ವಿದ್ಯಾಕೇಂದ್ರ ಮತ್ತು ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬುಧವಾರ ಅಕ್ಷರಾಭ್ಯಾಸ ಸಂಸ್ಕಾರ ಕಾರ್ಯಕ್ರಮದಲ್ಲಿ ಸರಸ್ವತಿ ಪೂಜೆ ನೆರವೇರಿಸಿ ಮಾತನಾಡಿದರು.
ಅಮೃತ ಭಾರತಿ ಟ್ರಸ್ಟ್ ನ ಕಾರ್ಯದರ್ಶಿ ಗುರುದಾಸ್ ಶೆಣೈ, ಅಮೃತ ಭಾರತಿ ವಿದ್ಯಾಲಯ ಅಧ್ಯಕ್ಷ ಶೈಲೇಶ್ ಕಿಣಿ, ವಿಶ್ವಸ್ಥರಾದ ಬಾಲಕೃಷ್ಣ ಮಲ್ಯ, ವಿಷ್ಣುಮೂರ್ತಿ ನಾಯಕ್, ಭಾಸ್ಕರ್ ಜೋಯಿಸ್, ರಾಮಕೃಷ್ಣ ಆಚಾರ್ಯ, ಸಂಸ್ಥೆ ಮುಖ್ಯಸ್ಥರಾದ ಅರುಣ್ ಕುಮಾರ್, ಅನಿತಾ, ಅಪರ್ಣಾ ಆಚಾರ್, ಶಕುಂತಳಾ ನಾಯಕ್, ಬೋಧಕ, ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.