More

    ಅಖಂಡ ಭಾರತ ನಿರ್ಮಿಸಿದ ಪಟೇಲ್: ಜಿಲ್ಲಾಧಿಕಾರಿ ಎಚ್.ಎನ್.ಗೋಪಾಲಕೃಷ್ಣ ಬಣ್ಣನೆ

    ಮಂಡ್ಯ: ರಾಜ, ಮಹಾರಾಜರ ಮನವೊಲಿಸುವ ಮೂಲಕ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಅಖಂಡ ಭಾರತ ನಿರ್ಮಾಣ ಮಾಡಿದರು ಎಂದು ಜಿಲ್ಲಾಧಿಕಾರಿ ಎಚ್.ಎನ್.ಗೋಪಾಲಕೃಷ್ಣ ಹೇಳಿದರು.
    ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಅಂಗವಾಗಿ ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಏಕತಾ ದಿವಸ ಕಾರ್ಯಕ್ರಮದಲ್ಲಿ ಮಾತನಾಡಿದರು.
    ಅಖಂಡ ಭಾರತಕ್ಕಾಗಿ ನಿರ್ಮಾಣ ಮಾಡಲು ಶ್ರಮಿಸಿದ ಪಟೇಲ್ ಅವರು ಮಹಾತ್ಯಾಗಿ. ಪ್ರಪಂಚದ ಅತ್ಯಂತ ದೊಡ್ಡ ಪ್ರತಿಮೆಯನ್ನು ನರ್ಮದಾ ತೀರದ ನದಿಯ ಮಧ್ಯದಲ್ಲಿ ನಿರ್ಮಾಣ ಮಾಡುವ ಮೂಲಕ ಅವರಿಗೆ ಗೌರವ ನೀಡಲಾಗಿದೆ. ಅದೇ ರೀತಿ ಅವರ ಜನ್ಮದಿನಾಚರಣೆ ಅಂಗವಾಗಿ ಏಕತಾ ದಿವಸ ಮಾಡುತ್ತಿದ್ದೇವೆ. ಸ್ವಾತಂತ್ರ್ಯ ಬರುವ ಮುನ್ನ 555ಕ್ಕೂ ಹೆಚ್ಚು ಪ್ರಾಂತ್ಯಗಳಿದ್ದವು. ಅವುಗಳನ್ನು ಒಟ್ಟುಗೂಡಿಸಿದ ಖ್ಯಾತಿ ಪಟೇಲ್ ಅವರಿಗೆ ಸಲ್ಲಬೇಕು ಎಂದರು.
    ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ನೆಹರು ಯುವ ಕೇಂದ್ರದ ಚಿನ್ನಗಿರಿಗೌಡ, ಹರ್ಷ, ಬಿ.ಎಸ್.ಅನುಪಮಾ ಇತರರಿದ್ದರು. ಇದೇ ವೇಳೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ನಂತರ ಐಕ್ಯತಾ ಓಟಕ್ಕೆ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts