More

  ಸರ್ದಾರ್ಸ್ ಪ್ರೌಢಶಾಲೆ ಅಭಿವೃದ್ಧಿಗೆ ಕೈಜೋಡಿಸಲಿ

  ಬೆಳಗಾವಿ: ನಗರದ ಸರ್ದಾರ್ಸ್ ಪ್ರೌಢಶಾಲೆಯಲ್ಲಿ ಓದಿದ ಅನೇಕ ವಿದ್ಯಾರ್ಥಿಗಳು ವಿವಿಧ ರಂಗಗಳಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ. ಈ ಶಾಲೆ ಅಭಿವೃದ್ಧಿಗೆ ಹಳೆಯ ವಿದ್ಯಾರ್ಥಿಗಳು ಮತ್ತು ದಾನಿಗಳು ಕೈಜೋಡಿಸಬೇಕು ಎಂದು ಶಾಸಕ ಆಸ್ೀ ಸೇಠ್ ಹೇಳಿದರು.

  ಇಲ್ಲಿನ ಸರ್ಕಾರಿ ಸರ್ದಾರ್ಸ್ ಪ್ರೌಢಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ 2023-24ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು. ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗೆ ತಲಾ 25 ಸಾವಿರ ರೂ. ನಗದು ಪುರಸ್ಕಾರ ನೀಡಲಾಗುವುದು. ಶೇ.95ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಯ ಪದವಿ ಹಂತದವರೆಗಿನ ಶೈಕ್ಷಣಿಕ ವೆಚ್ಚವನ್ನು ನಮ್ಮ ಟ್ರಸ್ಟ್ ವತಿಯಿಂದ ಭರಿಸಲಾಗುವುದು ಎಂದರು. ಶಾಲೆ ಗ್ರಂಥಾಲಯಕ್ಕೆ ಪೀಠೋಪಕರಣ ಕಾಣಿಕೆಯಾಗಿ ನೀಡಿದ ಡಾ.ವಿದ್ಯಾ ಅರಳಿಕಟ್ಟಿ ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ವ್ಯವಸ್ಥಾಪಕಿ ಎಸ್.ಸ್ವಾತಿ ಹಾಗೂ 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.

  ಬಿಇಒ ಲೀಲಾವತಿ ಹಿರೇಮಠ, ಶಿವಶಂಕರ ಹಾದಿಮನಿ, ರಮೇಶ ಮಂಗಳೇಕರ, ವೈ.ಎಂ.ಪಾಟೀಲ, ಅ್ರೆೆಜ್ ಮುಲ್ಲಾ, ಸಂಪದಾ ಕಲಕೇರಿ, ಎಂ.ಬಿ. ಅಡಕೆ, ಎಂ.ಎ.ಡಾಂಗಿ, ಎ.ಆರ್.ಮಠಪತಿ ಇದ್ದರು. ರವಿ ಹಲಕರ್ಣಿ ನಿರೂಪಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts