More

    ಸೀರೆ ಖರೀದಿಗೆ ಚರ್ಚಿಸಿ ಕ್ರಮ

    ಬೆಳಗಾವಿ: ಕೋವಿಡ್-19 ನಿಯಂತ್ರಣಕ್ಕಾಗಿ ಹಗಲಿರುಳು ಜೀವದ ಹಂಗು ತೊರೆದು ಶ್ರಮಿಸುತ್ತಿರುವ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಸೀರೆಗಳನ್ನು ನೇರವಾಗಿ ನೇಕಾರರಿಂದಲೇ ಖರೀದಿಸುವ ಕುರಿತು ಸಂಪುಟದಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.

    ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಜೊಲ್ಲೆ ಶಶಿಕಲಾ ನೇತೃತ್ವದ ನಿಯೋಗವು ರಾಜ್ಯ ಸರ್ಕಾರ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಸೀರೆಗಳನ್ನು ಸರಬರಾಜು ಮಾಡುತ್ತಿದ್ದು, ಸೀರೆಗಳನ್ನು ನೇಕಾರರಿಂದಲೇ ಖರೀದಿಸಬೇಕೆಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯಿಸಿದರು.

    ಲಾಕ್‌ಡೌನ್‌ನಿಂದ ರಾಜ್ಯದ ನೇಕಾರರ ಉತ್ಪನ್ನಗಳು ಮಾರಾಟವಾಗಿಲ್ಲ. ಪರಿಣಾಮ ನೇಕಾರರ ಕುಟುಂಬಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿವೆ. ಹಾಗಾಗಿ ನೇಕಾರ ಸಮುದಾಯದಯಕ್ಕೆ ಸಹಾಯ ಮಾಡಲು ಮುಂದಾಗಬೇಕು. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ನೇಕಾರರಿಂದಲೇ ನೇರವಾಗಿ ಸೀರೆ ಖರೀದಿಸಬೇಕು ಎಂದು ಮನವಿ ಮೂಲಕ ಆಗ್ರಹಿಸಿದರು. ಅದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನೇಕಾರರ ಕುಟುಂಬಗಳಿಗೆ ಯಾವುದೇ ರೀತಿ ಸಮಸ್ಯೆ ಉದ್ಭವಿಸದಂತೆ ಸರ್ಕಾರವು ಸಾಕಷ್ಟು ಸೌಲಭ್ಯ ಕಲ್ಪಿಸುತ್ತಿದೆ.

    ಇದೀಗ ಅವರ ಉತ್ಪನ್ನಗಳನ್ನು ಖರೀದಿಸುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಅಭಯ ಪಾಟೀಲ, ಮಹಾಂತೇಶ ದೊಡಗೌಡರ, ಅನಿಲ ಬೆನಕೆ, ಮಹಾದೇವಪ್ಪ ಯಾದವಾಡ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts