More

    IPL 2024ರಲ್ಲಿ ಮತ್ತೆ ಆಡುತ್ತಾರೆ ಸರ್ಫರಾಝ್ ಖಾನ್! ಈ ತಂಡದಿಂದ ಕಣಕ್ಕೆ?

    ಬೆಂಗಳೂರು: ಇಂಗ್ಲೆಂಡ್ ವಿರುದ್ಧ ರಾಜ್ ಕೋಟ್ ನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಪದಾರ್ಪಣೆ ಮಾಡಿದ ಮುಂಬೈನ ಸರ್ಫರಾಝ್ ಖಾನ್ ಟೆಸ್ಟ್ ಕ್ರಿಕೆಟ್ ನಲ್ಲಿ ತಮ್ಮ ಚೊಚ್ಚಲ ಪಂದ್ಯದಲ್ಲೇ ಆಕರ್ಷಕ ಬ್ಯಾಟಿಂಗ್​ ಮಾಡಿ ಮೆಚ್ಚುಗೆಗೆ ಪಾತ್ರರಾಗಿದ್ದ ಖಾನ್​ಗೆ ಮತ್ತೆ ಅದೃಷ್ಟ ಖುಲಾಯಿಸಿದೆ.

    ಇದನ್ನೂ ಓದಿ:ರಾಹುಲ್ ಗಾಂಧಿ ಸೂಚನೆಯಂತೆ ಕೇರಳ ವ್ಯಕ್ತಿಗೆ ರಾಜ್ಯ ಸರ್ಕಾರ ಪರಿಹಾರ: ವಿಜಯೇಂದ್ರ, ಸಿಟಿ ರವಿ ಖಂಡನೆ

    ಈ ಬಾರಿಯ ಐಪಿಎಲ್​ನಲ್ಲಿ ಬಿಕರಿಯಾಗದೇ ಉಳಿದಿದ್ದ ಯುವ ಆಟಗಾರನ ಖರೀದಿಗೆ ಇದೀಗ ಪ್ರಮುಖ ಫ್ರಾಂಚೈಸಿಯೊಂದು ಮುಂದಾಗಿದೆ ಎಂದು ವರದಿಯಾಗಿದೆ.

    ಪಶ್ಚಿಮ ಬಂಗಾಳದ ಅತ್ಯಂತ ವಿಶ್ವಾಸಾರ್ಹ ಪತ್ರಿಕೆ ಆನಂದಬಜಾರ್ ಪತ್ರಿಕೆ ವರದಿ ಮಾಡಿದ್ದು, ಮುಂಬೈನ ಎಡಗೈ ಆಟಗಾರ ಸರ್ಫರಾಜ್ ಖಾನ್ ಖರೀದಿಗೆ ಕೊಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಆಸಕ್ತಿವಹಿಸಿದೆ. ಕೆಕೆಆರ್​ ತಂಡದ ಮೆಂಟರ್ ಆಗಿರುವ ಗಂಭೀರ್ ಯುವ ಆಟಗಾರನನ್ನು ತಂಡಕ್ಕೆ ಆಯ್ಕೆ ಮಾಡುವಂತೆ ಸೂಚಿಸಿದ್ದಾರೆ ಎಂದು ಪಶ್ಚಿಮ ಬಂಗಾಳದ ಪ್ರಮುಖ ಪತ್ರಿಕೆಯೊಂದು ವರದಿ ಮಾಡಿದೆ.

    ಭರ್ಜರಿ ಬ್ಯಾಟಿಂಗ್ ಫಾರ್ಮ್​ನಲ್ಲಿರುವ ಸರ್ಫರಾಝ್ ಖಾನ್ ಅವರನ್ನು ಆಯ್ಕೆ ಮಾಡುವಂತೆ ಮೆಂಟರ್​ ಗಂಭೀರ್ ಸೂಚಿಸಿದ್ದಾರೆ ಎನ್ನಲಾಗಿದೆ. ಕೆಕೆಆರ್​ ತಂಡದಲ್ಲಿ ಭಾರತೀಯ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಹೈದರಾಬಾದ್​ ಕೆಎಸ್ ಭರತ್ ಮಾತ್ರ ಇದ್ದಾರೆ. ಇತ್ತ ಸರ್ಫರಾಝ್ ಖಾನ್ ಕೂಡ ವಿಕೆಟ್ ಕೀಪರ್ ಬ್ಯಾಟರ್. ಇದೀಗ ಹೆಚ್ಚುವರಿ ವಿಕೆಟ್ ಕೀಪರ್ ಆಯ್ಕೆಗೆ ಮುಂದಾಗಿರುವ ಕೆಕೆಆರ್ ಫ್ರಾಂಚೈಸಿ ಸರ್ಫರಾಝ್ ಖರೀದಿಗೆ ಹೆಚ್ಚಿನ ಆಸಕ್ತಿ ಹೊಂದಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

    ಈ ಹಿಂದೆ ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ನಲ್ಲಿದ್ದ ಸರ್ಫರಾಜ್, 2015ರಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದರು. ಅವರು 22.5 ರ ಸರಾಸರಿ ಮತ್ತು 130.58 ರ ಸ್ಟ್ರೈಕ್ ರೇಟ್‌ನೊಂದಿಗೆ 50 ಇನಿಂಗ್ಸ್​ಗಳಲ್ಲಿ 585 ರನ್ ಗಳಿಸಿದ್ದಾರೆ.

    370ನೇ ವಿಧಿ ಜಮ್ಮು ಮತ್ತು ಕಾಶ್ಮೀರ ಅಭಿವೃದ್ಧಿಗೆ ಅಡಚಣೆಯಾಗಿತ್ತು: ಪ್ರಧಾನಿ ಮೋದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts