More

    ಸಾರಿಗೆ ಸಂಸ್ಥೆ ಕಾರ್ಮಿಕರಿಂದ ಬೀದಿ ನಾಟಕ ಪ್ರದರ್ಶನ: ರಸ್ತೆ ಸುರಕ್ಷತೆ ಕುರಿತು ಜನರಲ್ಲಿ ಅರಿವು ಮೂಡಿಸುವ ಕಾರ್ಯ

    ಕನಕಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕಾರ್ಮಿಕರು ರಸ್ತೆ ಸುರಕ್ಷತೆ ಕುರಿತು ಬೀದಿ ನಾಟಕ ಪ್ರದರ್ಶಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

    ನಗರದ ಬಸ್ ನಿಲ್ದಾಣದಲ್ಲಿ ಸೋಮವಾರ ಕೆಎಸ್‌ಆರ್‌ಟಿಸಿ ಕಾರ್ಮಿಕರ ಸಾಂಸ್ಕೃತಿಕ ಕಲಾತಂಡದ ಉಸ್ತುವಾರಿ ನರಸಿಂಹರೆಡ್ಡಿ ನೇತೃತ್ವದಲ್ಲಿ ‘ಬದುಕಿ-ಬದುಕಿಸಿ’ ಎಂಬ ಬೀದಿ ನಾಟಕ ಮೂಲಕ ‘ರಸ್ತೆ ಸುರಕ್ಷಾ ಜೀವನ ರಕ್ಷೆ’ ಎಂಬ ನಾಟಕ ಪ್ರದರ್ಶನ ಮಾಡಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಸಾರಿಗೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಮಾತನಾಡಿ, ಕಾರ್ಮಿಕರು ತಮ್ಮ ದೈನಂದಿನ ಚಟುವಟಿಕೆಗಳ ಜತೆಗೆ ಬೀದಿ ನಾಟಕ ಪ್ರದರ್ಶಿಸಿ ಜನರಲ್ಲಿ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಸಂಚಾರದ ವೇಳೆ ಜಾಗೃತಿ ವಹಿಸಬೇಕು ಎಂದು ಹೇಳಿದರು.

    ಗ್ರಾಮಾಂತರ ಪೊಲೀಸ್ ಠಾಣೆ ಎಸ್‌ಐ ಭಾಸ್ಕರ್, ಅಗ್ನಿಶಾಮಕ ಠಾಣಾಧಿಕಾರಿ ಪುಟ್ಟಸ್ವಾಮಿ ಅವರು ಸಂಚಾರ ಮತ್ತು ರಸ್ತೆ ನಿಯಮಗಳ ಬಗ್ಗೆ ತಿಳಿಸಿದರು. ಸಂಚಾರ ಪೊಲೀಸ್ ಠಾಣಾಧಿಕಾರಿ ಜಯಣ್ಣ, ವಿಭಾಗ ನಿಯಂತ್ರಣಾಧಿಕಾರಿ ಎಂ.ರಾಜ್‌ಕುಮಾರ್, ಸಾರಿಗೆ ಹಿರಿಯ ಅಧಿಕಾರಿ ಪುರುಷೋತ್ತಮ್, ಸಾರಿಗೆ ಅಧಿಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts