More

    ಸರ್ಕಾರಿ ನೌಕರರಂತೆ ಪರಿಗಣಿಸಲು ಕೆಎಸ್‌ಆರ್‌ಟಿಸಿ ರಾಮನಗರ ವಿಭಾಗ ನೌಕರರು ಪಟ್ಟು

    ರಾಮನಗರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 4 ನಿಗಮಗಳ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು, ಅವರಿಗೆ ನೀಡುವಂತೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿ ರಾಮನಗರ ವಿಭಾಗದ ನೌಕರರು ಜಿಲ್ಲಾಧಿಕಾರಿ ಕಚೇರಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.

    ನಗರದ ಕಂದಾಯ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬುಧವಾರ ಜಾಥಾ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ನೌಕರರು, ಸಂಸ್ಥೆಯ ನೌಕರರ ವೇತನ ಇತರ ಸರ್ಕಾರಿ ನೌಕರರಿಗಿಂತ ಕಡಿಮೆ ಇದೆ. ಸುಮಾರು 25 ವರ್ಷಗಳಿಂದ ವೇತನ ತಾರತಮ್ಯ ಮುಂದುವರಿದಿದ್ದು, ಮೂರು ವರ್ಷಗಳ ಹಿಂದೆಯೇ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆ ಮಾಡಿದೆ, ಆದರೆ, ಸಾರಿಗೆ ನೌಕರರಿಗೆ ಇದುವರೆಗೂ ವೇತನ ಪರಿಷ್ಕರಣೆ ಮಾಡಿಲ್ಲ ಎಂದು ಆರೋಪಿಸಿದರು.

    ವೇತನ ಪರಿಷ್ಕರಣೆ ಆಗಿಲ್ಲ: ವಿವಿಧ ಬೇಡಿಕೆ ಈಡೇರಿಸುವಂತೆ ಸಾರಿಗೆ ಸಂಸ್ಥೆಯ ಆಡಳಿತ ವರ್ಗಕ್ಕೆ ಮತ್ತು ಸರ್ಕಾರಕ್ಕೆ ಈಗಾಗಲೇ ಹಲವು ಕಾರ್ಮಿಕ ಸಂಘಟನೆಗಳು ಮನವಿ ಸಲ್ಲಿಸಿದ್ದರೂ ಬೇಡಿಕೆಗಳು ಈಡೇರಿಲ್ಲ. ಅಲ್ಲದೆ ಸಾರಿಗೆ ಸಂಸ್ಥೆ ನೌಕರರಿಗೆ 2020ರ ಜ.1ರಿಂದ ಹೊಸ ವೇತನ ಪರಿಷ್ಕರಣೆ ಜಾರಿಗೆ ಬರಬೇಕಿತ್ತು. ಆದರೆ, ಈ ಸಂಬಂಧ ಯಾವುದೇ ಪ್ರಗತಿ ಕಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳ ಕಚೇರಿ ತಹಸೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು.

    ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ತಿಪ್ಪೇಸ್ವಾಮಿ, ಖಜಾಂಚಿ ಸತೀಶ್, ರಾಮನಗರ ವಿಭಾಗದ ಕನಕಪುರ, ರಾಮನಗರ, ಚನ್ನಪಟ್ಟಣ, ಹಾರೋಹಳ್ಳಿ, ಮಾಗಡಿ, ಆನೇಕಲ್, ಘಟಕಗಳ ಚಾಲಕ, ನಿರ್ವಾಹಕ, ಹಾಗೂ ತಾಂತ್ರಿಕ, ಆಡಳಿತ, ವಿಭಾಗೀಯ ಕಾರ್ಯಾಗಾರದ ಸಿಬ್ಬಂದಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts