26.8 C
Bangalore
Friday, December 13, 2019

ಸಾಸ್ತಾನ ಬಂದ್ ಯಶಸ್ವಿ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ವಿಜಯವಾಣಿ ಸುದ್ದಿಜಾಲ ಬ್ರಹ್ಮಾವರ
ಸಾಸ್ತಾನ ಟೋಲ್‌ನಲ್ಲಿ ಸ್ಥಳೀಯ ವಾಹನಗಳಿಂದಲೂ ಟೋಲ್ ಸಂಗ್ರಹ ವಿರುದ್ಧ ಕರೆ ನೀಡಿದ್ದ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸ್ಥಳೀಯರಿಂದಲೂ ಟೋಲ್ ಸಂಗ್ರಹಿಸುತ್ತಿರುವ ನವಯುಗ ಕಂಪನಿ ಹೋರಾಟ ಸಮಿತಿ ಕೆಲವು ಬೇಡಿಕೆಗಳನ್ನು ಈಡೇರಿಸಲು ಮುಂದಾಗುತ್ತಿಲ್ಲ. ಪೊಲೀಸ್, ಜನಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆಯ ನಿರ್ಣಯವನ್ನೂ ಅದು ಮಾನ್ಯ ಮಾಡುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಟೋಲ್ ಸಮೀಪ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಬಾಳೆಕುದ್ರು ಶ್ರೀ ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ, ಕೇಮಾರು ಈಶ ವಿಠಲ ಸ್ವಾಮೀಜಿ, ಸ್ಥಳಿಯ ಚರ್ಚ್ ಧರ್ಮಗುರು ವಾಲ್ಟರ್ ಮೆಂಡೊನ್ಸಾ, ಮೌಲಾನಾ ಇರ್ಫಾನ್ ಅಲನ್ ಮಾತನಾಡಿದರು.

ಉಡುಪಿ ಶಾಸಕ ಕೆ.ರಘುಪತಿ ಭಟ್, ಸಂಸದೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಲಾಲಾಜಿ ಮೆಂಡನ್, ರಾಕೇಶ್ ಮಲ್ಲಿ, ಜಯಕರ್ನಾಟಕ ಜಿಲ್ಲಾ ಅಧ್ಯಕ್ಷ ಸತೀಶ್ ಪೂಜಾರಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

10 ಕಿ.ಮೀ ವ್ಯಾಪ್ತಿಗೆ ವಿಸ್ತರಣೆ: ಸಾಸ್ತಾನ ಬಂದ್ ಹಾಗೂ ಪ್ರತಿಭಟನೆ ಹಿನ್ನೆಲೆಯಲ್ಲಿ ಟೋಲ್ ವಿನಾಯಿತಿಯನ್ನು ಟೋಲ್‌ಗೇಟ್‌ನಿಂದ 10 ಕಿ.ಮೀ ವ್ಯಾಪ್ತಿಗೆ ವಿಸ್ತರಿಸಲಾಗಿದೆ. ಮಾಬುಕಳದಿಂದ ಮಣೂರು ತನಕದ ಕೋಟ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ವಾಹನ ಚಾಲಕರಿಗೆ ಟೋಲ್ ವಿನಾಯಿತಿ ನೀಡಲಾಗಿದೆ. ಈ ಹಿಂದೆ ಟೋಲ್ ವಿನಾಯಿತಿ 5.ಕಿ.ಮೀ ಪ್ರದೇಶ ವ್ಯಾಪ್ತಿಗೆ ಸೀಮಿತವಾಗಿತ್ತು.

ಡಿಸಿ, ಎಸ್‌ಪಿ ಭೇಟಿಗೆ ಪಟ್ಟು: ತಮ್ಮ ಬೇಡಿಕೆ ಆಲಿಸಲು ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಖುದ್ದು ಸ್ಥಳಕ್ಕೆ ಆಗಮಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಇನ್ನೊಂದೆಡೆ ಟೋಲ್ ಸಂಗ್ರಹ ವಿಚಾರದಲ್ಲಿ ಉಡುಪಿಯಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಮಾತುಕತೆ ವಿಫಲಗೊಂಡ ಮಾಹಿತಿ ತಿಳಿಯುತ್ತಿದ್ದಂತೆ ಪ್ರತಿಭಟನಾಕಾರರು ರಸ್ತೆ ತಡೆದು ಪ್ರತಿಭಟಿಸಿದರು. ಸ್ಥಳದಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಬಳಿಕ ಬಿಡುಗಡೆ ಮಾಡಿದರು.

ಬ್ರಹ್ಮಾವರದಲ್ಲೂ ಪ್ರತಿಭಟನೆ: ಸಾಸ್ತಾನದಲ್ಲಿ ಸ್ಥಳೀಯರಿಂದ ಟೋಲ್ ಸಂಗ್ರಹ ವಿರುದ್ಧ ಕರೆ ನೀಡಿದ್ದ ಬಂದ್‌ಗೆ ಬೆಂಬಲವಾಗಿ ಬ್ರಹ್ಮಾವರ ಬಸ್‌ನಿಲ್ದಾಣ ಬಳಿ ಸ್ಥಳೀಯರು ಕೆಲಹೊತ್ತು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಬ್ರಹ್ಮಾವರ ತಾಲೂಕು ಹೋರಾಟ ಸಮಿತಿ ಬಾರಕೂರು ಸತೀಶ್ ಪೂಜಾರಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಆರೂರು ಗ್ರಾಪಂ ಅಧ್ಯಕ್ಷ ರಾಜು ಕುಲಾಲ್. ಬಿಲ್ಲವ ಮುಖಂಡ ರಾಘವೇಂದ್ರ ಕುಂದರ್, ಜೆ.ಬಿ.ಉಮೇಶ್ ಪೂಜಾರಿ ಮಾತನಾಡಿದರು. ಮುಖಂಡರಾದ ಸತ್ಯರಾಜ್ ಬಿರ್ತಿ, ಸೂರ್ಯನಾರಾಯಣ ಗಾಣಿಗ, ರಾಮಕೃಷ್ಣ ಗಾಣಿಗ, ಉದಯಕುಮಾರ್, ಅರುಣ್ ಭಂಡಾರಿ ಬೈಕಾಡಿ ಮತ್ತಿತರರಿದ್ದರು.

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....