ಸಾಸ್ವೆಹಳ್ಳಿ: ಹೊನ್ನಾಳಿ ತಾಲೂಕು ಸಾಸ್ವೇಹಳ್ಳಿ ಹೋಬಳಿಯ ಹೊಸಹಳ್ಳಿ ಗ್ರಾಮದ ರೈತ ರಾಮಪ್ಪ (35) ಸಾಲಬಾಧೆ ತಾಳದೆ ಬುಧವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲಿಂಗಾಪುರದ ಖಾಸಗಿ ಬ್ಯಾಂಕ್ ಸೇರಿ ಇತರೆಡೆ ಬೆಳೆ ಸಾಲ ಪಡೆದಿದ್ದರು. ಕಳೆದ ಎರಡು ವರ್ಷಗಳಿಂದ ಸಮರ್ಪಕ ಇಳುವರಿ ಬರದ ಕಾರಣ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮೃತನ ಪತ್ನಿ ಅನಿತಾ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತರಿಗೆ ತಂದೆ ತಾಯಿ, ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.