More

    RSS ನಿಷೇಧಿಸುವ ಬದಲು ಅಲ್ಲಿನ ಅಹಿಂದ ವರ್ಗವನ್ನು ಸೆಳೆಯಬೇಕು: ಸತೀಶ್ ಜಾರಕಿಹೊಳಿ

    ಬೆಳಗಾವಿ: RSS, ಬಜರಂಗದಳ ಸಂಘಟನೆಗಳ ನಿಷೇಧದ ವಿಚಾವಾಗಿ ಚರ್ಚೆ ನಡೆಯಬೇಕಾದರೆ ಸತೀಶ್ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಅಹಿಂದಾಗೆ ಶಕ್ತಿ ತುಂಬಲು RSS-ಬಜರಂಗದಳ ಸಂಘಟನೆಗಳನ್ನು ಸಚಿವ ಸತೀಶ್ ಜಾರಕಿಹೊಳಿ ಟಾರ್ಗೆಟ್ ಮಾಡುತ್ತಿದ್ದಾರಾ ಎನ್ನುವ ಅನುಮಾನಗಳನ್ನು ಹುಟ್ಟುಹಾಕಿದೆ.

    ಇದನ್ನೂ ಓದಿ: ಶಿಕ್ಷಣ ಪಡೆದು ಮೂಢನಂಬಿಕೆ ಅಳಿಸಿಹಾಕಿ: ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕ ಸತೀಶ್ ಜಾರಕಿಹೊಳಿ ಕಿವಿಮಾತು

    ಬೆಳಗಾವಿಯಲ್ಲಿ ಸತೀಶ್ ಜಾರಕಿಹೊಳಿ “ಒಂದು ಸಂಘಟನೆ ನಿಷೇಧ ಮಾಡಿದ್ರೆ ಮತ್ತೊಂದು ಸಂಘಟನೆ ಹುಟ್ಟಿಕೊಳ್ಳುತ್ತದೆ. ಬದಲಾಗಿ RSSನಲ್ಲಿರುವ ದಲಿತರು, ಶೂದ್ರರು, ಕೆಳವರ್ಗದವರನ್ನು ಸೆಳೆಯಬೇಕಿದೆ. ಅವರಿಗೆ ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆ ತಿಳಿಹೇಳುವ ಪ್ರಯತ್ನ ಮಾಡುತ್ತೇವೆ. RSSನಲ್ಲಿರುವ ದಲಿತರನ್ನು ಸೆಳೆಯುವ ಮೂಲಕ ಅಹಿಂದಗೆ ಮತ್ತಷ್ಟು ಶಕ್ತಿ ತುಂಬಬೇಕಿದೆ. 

    ಇದನ್ನೂ ಓದಿ: ಸುದೀಪ್ ಮೂರು ತಾಸಿನ ನಾಯಕನಷ್ಟೇ: ಸತೀಶ್ ಜಾರಕಿಹೊಳಿ

    ಯಾವುದೇ ಸಂಘಟನೆ ಬ್ಯಾನ್ ಮಾಡುವುದು ನಮಗೆ ಪರಿಹಾರವಲ್ಲ. ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ, ಮತಾಂತರ ನಿಷೇಧ ಕಾಯ್ದೆ ರದ್ದು ವಿಚಾರ, ಈ ಎಲ್ಲ ಕಾಯ್ದೆಗಳ ಬಗ್ಗೆ ಚರ್ಚೆ ಆಗಬೇಕು, ತಕ್ಷಣವೇ ನಿಷೇಧ ಕಾಯ್ದೆ ಜಾರಿ ಅಸಾಧ್ಯ. ಈ ಬಗ್ಗೆ ಸರ್ಕಾರ ಹಾಗೂ ಪಕ್ಷದಲ್ಲಿ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಆಗಬೇಕು. ಸಂಪೂರ್ಣ ಚರ್ಚೆ ಆದ ಮೇಲೆಯೇ ಈ ಸಂಬಂಧ ಸರ್ಕಾರದಿಂದ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಹೇಳಿಕೆ ನೀಡಿದ್ದಾರೆ. (ದಿಗ್ವಿಜಯ)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts