ಅಧಿಕಾರ ಹಂಚಿಕೆಯಾಗಿಲ್ಲ, 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ: ಸತೀಶ್ ಜಾರಕಿಹೊಳಿ

Satish Jarakiholi
Published on

ದಾವಣಗೆರೆ: ಮುಂದಿನ ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಂಖ್ಯಮಂತ್ರಿಯಾಗಿ ರಾಜ್ಯದಲ್ಲಿ ಆಡಳಿತ ನಡೆಸುತ್ತಾರೆ. ಆ ವಿಶ್ವಾಸ ನಮಗಿದೆ. ಎರಡೂವರೆ ವರ್ಷ ಅಧಿಕಾರ ಹಂಚಿಕೆಯಾಗಿದೆ ಎಂಬುದರಲ್ಲಿ ಯಾವುದೇ ಹುರುಳಿಲ್ಲ. ಅರ್ಧಕ್ಕೆ ಅಧಿಕಾರ ಬಿಟ್ಟುಕೊಡುವಂತೆ ಯಾರೂ ಸೂಚನೆ ನೀಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಸತೀಶ್ ಜಾರಿಕಿಹೊಳಿ ಮಾತನಾಡುತ್ತಾ, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಐದು ವರ್ಷ ಇರುತ್ತಾರೆ. ಎರಡು ವರ್ಷದ ಬಳಿಕ ಸಿಎಂ ಸ್ಥಾನ ಬಿಟ್ಟುಕೊಡಬೇಕೆಂದು ಯಾರೂ ಹೇಳಿಲ್ಲ. ಉಳಿದ್ದದ್ದು ಪಕ್ಷದ ತೀರ್ಮಾನಕ್ಕೆ ಬಿಟ್ಟ ವಿಚಾರ ಎಂದರು.

ಮುಂದಿನ ಅವಧಿಗೆ ನಾನೂ ಸಿಎಂ ಆಕಾಂಕ್ಷಿ!

ಹಾವೇರಿ: ಈ ಅವಧಿಯಲ್ಲಿ ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸುತ್ತಾರೆ. ಹೀಗಾಗಿ ನಾನು ಸಿಎಂ ಆಕಾಂಕ್ಷಿ ಅಲ್ಲ. ಮುಂದಿನ ಬಾರಿ ನಾನು ಸಿಎಂ ಆಕಾಂಕ್ಷಿಯಾಗಿದ್ದೇನೆ. ಭವಿಷತ್​ನಲ್ಲಿ ನೀವು ಸಿಎಂ ಆಗುತ್ತೀರ ಎಂದು ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net