ಸತೀಶ ಜಾರಕಿಹೊಳಿ ಬೆಂಬಲಿಗರ ಪ್ರತಿಭಟನೆ

ಬೆಳಗಾವಿ: ತಾಲೂಕಿನ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸುವಂತೆ ಆಗ್ರಹಿಸಿ ಮಂಗಳವಾರ ನಗರದ ಚನ್ನಮ್ಮ ವೃತ್ತದಲ್ಲಿ ಬ್ಯಾಂಕಿನ ಮೂವರು ನಿರ್ದೇಶಕರು ಮತ್ತು ಶಾಸಕ ಸತೀಶ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಬ್ಯಾಂಕ್ ನಿರ್ದೇಶಕರಾದ ಮಹಾಂತೇಶ ಉಳ್ಳೇಗಡ್ಡಿ, ರಾಮಣ್ಣ ಗುಳ್ಳಿ, ಪ್ರಸಾದ ಪಾಟೀಲ, ಇತರರು ಇದ್ದರು.