

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರದ ಮಾಜಿ ಸಚಿವ, ಎಎಪಿ ನಾಯಕ ಸತ್ಯೇಂದರ್ ಜೈನ್ಗೆ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರಿದ್ದ ಏಕಸದಸ್ಯ ಪೀಠವು ಪ್ರಕರಣದ ಇತರೆ ಆರೋಪಿಗಳಾದ ವೈಭವ್ ಜೈನ್ ಮತ್ತು ಅಂಕುಶ್ ಜೈನ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.
ಸತ್ಯೇಂದರ್ ಜೈನ್ ಪರ ವಕೀಲರು ತಮ್ಮ ಕಕ್ಷಿದಾರರು ತನಿಖೆಯ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯಕ್ಕೆ ಎಲ್ಲಾ ರೀತಿಯ ಸಹಕಾರವನ್ನು ನೀಡಿದ್ಧಾರೆ. ಜೊತೆಗೆ ಅವರ ಆದಾಯವನ್ನು ತಪ್ಪಾಗಿ ನಮೂದಿಸಲಾಗಿದ್ದು ಈ ಹಿನ್ನಲೆಯಲ್ಲಿ ಅವರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿದರು.
ಆರೋಪಿ ಸ್ಥಾನದಲ್ಲಿರುವ ಸತ್ಯೇಂದರ್ ಜೈನ್ ಅವರು ಸಮಾಜದಲ್ಲಿ ಪ್ರಭಾವಿ ವ್ಯಕ್ತಿಯಾಗಿದ್ದು ಒಂದು ವೇಳೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದಲ್ಲಿ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಹೆಚ್ಚಿದೆ. ಆದ ಕಾರಣ ಅವರಿಗೆ ಜಾಮೀನು ನೀಡಬಾರದು ಎಂದು ED ಪರ ವಕೀಲರು ಔಆದ ಮಂಡಿಸಿದ್ದರು.
ಮೇ 30,2022ರಂದು ಸತ್ಯೇಂದರ್ ಜೈನ್ ಒಡೆತನದ ಕಂಪನಿಗಳಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂಬ ಆರೋಪದ ಮೇಲೆ ಜಾರಿ ನಿರ್ದೇಶನಾಲಯ ಎಎಪಿ ನಾಯಕನನ್ನು ವಶಕ್ಕೆ ಪಡೆದಿತ್ತು,