More

    ಪ್ರಪ್ರಥಮ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾಳೆ ಸೌದಿ ಅರೇಬಿಯಾದ ಚೆಲುವೆ

    ಸೌದಿ ಅರೇಬಿಯಾ: ಇಸ್ಲಾಮಿಕ್ ರಾಷ್ಟ್ರಗಳಲ್ಲಿ ಸೌದಿ ಅರೇಬಿಯಾ ಅತ್ಯಂತ ಶ್ರೀಮಂತ ರಾಷ್ಟ್ರವಾಗಿದೆ. ಈ ದೇಶದಿಂದ ಒಬ್ಬ ಮಹಿಳೆ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿದ ದಾಖಲೆ ಇಲ್ಲ. ಆದರೆ ಮೊಟ್ಟಮೊದಲ ಬಾರಿಗೆ, ಸೌದಿ ಅರೇಬಿಯಾ ಮಿಸ್ ಯೂನಿವರ್ಸ್ 2024 ಸೌಂದರ್ಯ ಸ್ಪರ್ಧೆಯಲ್ಲಿ ಸ್ಪರ್ಧಿಸಲಿದೆ.

    73 ನೇ ವಿಶ್ವ ಸುಂದರಿ ಸ್ಪರ್ಧೆಯು ಈ ವರ್ಷ ಸೆಪ್ಟೆಂಬರ್ 28 ರಂದು ಮೆಕ್ಸಿಕೊದಲ್ಲಿ ನಡೆಯಲಿದೆ. ಸೌದಿ ಅರೇಬಿಯಾ ಮೊದಲ ಬಾರಿಗೆ ಇದರಲ್ಲಿ ಭಾಗವಹಿಸುತ್ತಿದೆ. ಈ ದೇಶವನ್ನು ರೂಪದರ್ಶಿ ರೂಮಿ ಅಲ್ಕಾಹ್ತಾನಿ (27) ಪ್ರತಿನಿಧಿಸಿದ್ದಾರೆ. ವಿಶ್ವದ ಅತ್ಯಂತ ಜನಪ್ರಿಯ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ತನ್ನ ದೇಶವನ್ನು ಪ್ರತಿನಿಧಿಸುವುದಾಗಿ ಸೌದಿ ಅರೇಬಿಯಾ ಘೋಷಿಸಿದೆ. ರೂಮಿ ಅಲ್ಕಾಹ್ತಾನಿ ಕೂಡ ತಮ್ಮ ಮನಮೋಹಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ, ರೂಮಿ ಸ್ಟ್ರಾಪ್‌ಲೆಸ್ ಸೀಕ್ವಿನ್ಡ್ ಫ್ರಾಕ್ ಅನ್ನು ಧರಿಸಿದ್ದಾರೆ.

    “ಮಿಸ್ ಯೂನಿವರ್ಸ್ 2024 ಸ್ಪರ್ಧೆಯಲ್ಲಿ ಭಾಗವಹಿಸಲು ನನಗೆ ಗೌರವವಿದೆ. ಸೌದಿ ಅರೇಬಿಯಾ ಮೊದಲ ಬಾರಿಗೆ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದೆ’ ಎಂದು ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಅರೇಬಿಕ್ ಭಾಷೆಯಲ್ಲಿ ಬರೆದಿದ್ದಾರೆ. ಇದರೊಂದಿಗೆ ರೂಮಿ ಅಲ್ ಕಹ್ತಾನಿ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ ಮೊದಲ ಸೌದಿ ಯುವತಿ ಎಂಬ ಇತಿಹಾಸ ಸೃಷ್ಟಿಸಲಿದ್ದಾರೆ.

    ರಿಯಾದ್ ನಲ್ಲಿ ಹುಟ್ಟಿ ಬೆಳೆದ ರೂಮಿ ಅಧಿಕೃತವಾಗಿ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ರೂಮಿ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಇದೇ ಮೊದಲಲ್ಲ. ಕೆಲವು ವಾರಗಳ ಹಿಂದೆ ಮಲೇಷ್ಯಾದಲ್ಲಿ ನಡೆದ ಮಿಸ್ ಅಂಡ್ ಮಿಸೆಸ್ ಗ್ಲೋಬಲ್ ಏಷ್ಯನ್ ಸ್ಪರ್ಧೆಯಲ್ಲೂ ಭಾಗವಹಿಸಿದ್ದರು. ಸೌದಿ ಸೌಂದರ್ಯ ತಾರೆಯರು ಅಂತರಾಷ್ಟ್ರೀಯ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗವಹಿಸದಿದ್ದರೂ, ಅವರು ದೇಶದಲ್ಲಿ ಸ್ಥಳೀಯ ಸೌಂದರ್ಯ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾರೆ. ಸ್ಥಳೀಯ ಸೌಂದರ್ಯ ಸ್ಪರ್ಧೆಯಲ್ಲಿ ರೂಮಿ ಮಿಸ್ ಸೌದಿ ಅರೇಬಿಯಾ ಕಿರೀಟವನ್ನು ಪಡೆದರು. ಅವರು ಮಿಸ್ ಅರಬ್ ವರ್ಲ್ಡ್ ಪೀಸ್ 2021 ಮತ್ತು ಮಿಸ್ ವುಮೆನ್ ಸೌದಿ ಅರೇಬಿಯಾ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಈಗ ವಿಶ್ವ ವೇದಿಕೆಯಲ್ಲಿ ಮಿಂಚಲು ಸಿದ್ಧವಾಗಿದೆ.

    ನಟಿಯಂತೆ ಕಾಣಲು 100ಕ್ಕೂ ಹೆಚ್ಚು ಪ್ಲಾಸ್ಟಿಕ್ ಸರ್ಜರಿ; ಯುವತಿ ಖರ್ಚು ಮಾಡಿದ್ದು ಬರೋಬ್ಬರಿ 4 ಕೋಟಿ ರೂ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts