More

    ವೃದ್ಧಿಮಾನ್ ಸಾಹ ಫಿಟ್ನೆಸ್ ಕುರಿತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದೇನು..?

    ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ವೇಳೆಗೆ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹ ಸಂಪೂರ್ಣ ಫಿಟ್ ಆಗಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಯುಎಇಯಲ್ಲಿ ಐಪಿಎಲ್ ಟೂರ್ನಿ ವೇಳೆ ಸಾಹ ಗಾಯದ ಸಮಸ್ಯೆಗೆ ತುತ್ತಾಗಿದ್ದರು. ಲೀಗ್‌ನ ಪ್ಲೇಆಫ್ ಹಂತದಿಂದಲೂ ಹೊರಗುಳಿದಿದ್ದರು. ತಾಂತ್ರಿಕವಾಗಿ ಸಾಹ ಅವರನ್ನು ಭಾರತ ಟೆಸ್ಟ್ ತಂಡದ ಅತ್ಯುತ್ತಮ ವಿಕೆಟ್ ಕೀಪರ್ ಎಂದು ಗುರುತಿಸಲಾಗಿದೆ.

    ಸಾಹ ಲಭ್ಯತೆ ಕುರಿತು ವಾರದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ತಂಡ ಪ್ರಕಟಿಸುವ ವೇಳೆ ಹೇಳಲಾಗಿತ್ತು. ‘ಬಿಸಿಸಿಐ ಕಾರ್ಯವೈಖರಿ ಎಷ್ಟೋ ಜನರಿಗೆ ಗೊತ್ತಿಲ್ಲ’ ಎಂದು ಗಂಗೂಲಿ ವಾರ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ. ಗಾಯಗೊಂಡಿರುವ ಆಟಗಾರರ ಕುರಿತು ಬಿಸಿಸಿಐ ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಎಂಬ ಟೀಕೆಗೆ ಗಂಗೂಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಬಿಸಿಸಿಐ ತರಬೇತುದಾರರಿಗೆ, ಫಿಸಿಯೋ ಹಾಗೂ ವೃದ್ಧಿಮಾನ್ ಸಾಹಗಷ್ಟೇ ಗೊತ್ತು, ಅವರ ಗಾಯದ ಸಮಸ್ಯೆ ಎಂದರು. ವೃದ್ಧಿಮಾನ್ ಸಾಹ ಆಸ್ಟ್ರೇಲಿಯಾಗೆ ಪ್ರಯಾಣಿಸಲಿದ್ದು, ಟೆಸ್ಟ್ ಸರಣಿಯಲ್ಲಿ ಆಡಲಿದ್ದಾರೆ ಎಂದರು.

    ರಿಷಭ್ ಪಂತ್ ಅವರನ್ನು ಭಾರತ ಟೆಸ್ಟ್ ತಂಡದ ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿದೆ. ಐಪಿಎಲ್ ವೇಳೆ ಗಾಯಗೊಂಡಿದ್ದ ರೋಹಿತ್ ಶರ್ಮ ಫಿಟ್ನೆಸ್ ಕುರಿತು ಇರುವ ಗೊಂದಲ ಹಾಗೆಯೇ ಮುಂದುವರಿದಿದೆ. ಸದ್ಯ ರೋಹಿತ್ ಶರ್ಮ ಶೇಕಡ 70 ಫಿಟ್ ಆಗಿದ್ದು, ಏಕದಿನ ಹಾಗೂ ಟಿ20 ಸರಣಿಗಳಿಂದ ವಿಶ್ರಾಂತಿ ನೀಡಲಾಗಿದೆ ಎಂದರು. ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗಾವಸ್ಕರ್ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಡಿಸೆಂಬರ್ 18 ರಿಂದ ಆರಂಭವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts