ಸವದತ್ತಿ: ಮತಗಟ್ಟೆಗಳಲ್ಲಿ ಸೇವೆ ಸಲ್ಲಿಸಲಿದ್ದಾರೆ ವಿದ್ಯಾರ್ಥಿಗಳು

ಸವದತ್ತಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತಗಟ್ಟೆಗಳಿಗೆ ಬರುವ ವಯೋವೃದ್ಧರಿಗೆ, ಅಂಗವಿಕಲರಿಗೆ ಸಹಾಯ ಮಾಡುವ ಉದ್ದೇಶದಿಂದ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಎನ್‌ಸಿಸಿ ವಿದ್ಯಾರ್ಥಿಗಳು ಸೇವೆ ಸಲ್ಲಿಸಿಲಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ರಾಜಗೋಪಾಲ ತಿಳಿಸಿದ್ದಾರೆ.

ಪಟ್ಟಣದ ಪುರಸಭೆ ಆವರಣದಲ್ಲಿ ಶುಕ್ರುವಾರ ಶಿಕ್ಷಣ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಘಟಕ ಹಮ್ಮಿಕೊಂಡ ಮತದಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು. ಜಾಥಾ ಪುರಸಭೆಯಿಂದ ಪ್ರಾರಂಭವಾಗಿ ಬಜಾರ್ ಮೂಲಕ ಅಂಬೇಡ್ಕರ್ ಪ್ರತಿಮೆ ಬಳಿ ಆಗಮಿಸಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ ಮಾತನಾಡಿ, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ ವಿದ್ಯಾರ್ಥಿಗಳು ನಿಸ್ವಾರ್ಥ ಮನೋಭಾವಣೆಯಿಂದ ಬರುವ ಲೋಕಸಭಾ ಚುನಾವಣೆಯಲ್ಲಿ ಮತಗಟ್ಟೆಗಳಲ್ಲಿ ಸೇವೆ ಸಲ್ಲಿಸಬೇಕು ಎಂದರು.

ತಹಸೀಲ್ದಾರ್ ನವೀನ ಹುಲ್ಲೂರ, ತಾಪಂ ಇಒ ಸಿ.ಬಿ ದೇವರಮನಿ, ಪುರಸಭೆಯ ಆಹಾರ ನಿರೀಕ್ಷಕ ಪ್ರಕಾಶ ಮಠದ, ಎಸ್.ವೈ. ಹಾದಿಮನಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ.ಬಳಿಗಾರ, ಅಕ್ಷರ ದಾಸೋಹದ ಸಹಾಯಕ ನಿರ್ದೆಶಕ ಎಫ್.ಯು.ಪೂಜೇರ, ತಾಲೂಕು ಶಿಕ್ಷಕ ಸಂಘದ ಅಧ್ಯಕ್ಷ ಎಸ್.ವಿ.ಬೆಳವಡಿ, ಎಸ್.ಬಿ.ಬೆಟ್ಟದ, ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಸಂಚಾಲಕ ಬಸವರಾಜ ಜನಕಟ್ಟಿ, ತಾಲೂಕು ಕಾರ್ಯದರ್ಶಿ ಎನ್.ಎನ್.ಕಬ್ಬೂರ ದೈಹಿಕ ಪರಿವಿಕ್ಷಕ ವೈ.ಎಂ.ಶಿಂಧೆ ಇದ್ದರು.