More

    ಪ್ರಣಾಳಿಕೆಯಲ್ಲಿ ಪರಿಸರ ರಕ್ಷಣೆ ಅಂಶಗಳಿಗೆ ಒತ್ತಾಯಿಸಿ ‘ಸಮಾವೇಶ’

    ಬೆಂಗಳೂರು: ಎಲ್ಲ ರಾಜಕೀಯ ಪಕ್ಷಗಳು ಲೋಕಸಭಾ ಚುನಾವಣೆಯ ತಮ್ಮ ಪ್ರಣಾಳಿಕೆಯಲ್ಲಿ ಪರಿಸರ ರಕ್ಷಣಾ ಕಾರ್ಯಸೂಚಿಯನ್ನು ಸೇರಿಸಬೇಕು ಎಂದು ‘ಪರಿಸರಕ್ಕಾಗಿ ನಾವು’ ಸಂಘಟನೆ ಒತ್ತಾಯಿಸಿದೆ.

    ಈ ಸಂಬಂಧ ಶನಿವಾರ (ಏ. 6) ಬೆಳಗ್ಗೆ 11.30ಕ್ಕೆ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪರಿಸರ ಪ್ರಣಾಳಿಕೆಗಾಗಿ ‘ಬೆಂಗಳೂರು ಸಮಾವೇಶ’ ಹಮ್ಮಿಕೊಳ್ಳಲಾಗಿದ್ದು, ಪ್ರಮುಖ ಅಂಶಗಳ ಕುರಿತು ಚರ್ಚಿಸಲಾಗುವುದು. ಈ ಅಂಶಗಳನ್ನು ಎಲ್ಲ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಸೇರಿಸುವಂತೆ ಮನವಿ ಮಾಡಲಾಗುವುದು ಎಂದು ಸಂಘಟನೆ ತಿಳಿಸಿದೆ.

    ಜಗತ್ತಿನಲ್ಲೆಡೆ ಅತಿವೃಷ್ಟಿ, ಅನಾವೃಷ್ಟಿ, ನೀರಿನ ಅಭಾವ, ಪ್ರವಾಹ, ಬರಗಾಲ ಸೇರಿ ಈಗಾಗಲೇ ಹಲವು ಸಂಕಷ್ಟಗಳನ್ನು ಎದುರಿಸುತ್ತಿದ್ದೇವೆ. ಈ ಬಗ್ಗೆ ನಿರ್ಲಕ್ಷ್ಯ ಮಾಡಿದಲ್ಲಿ ಭವಿಷ್ಯದಲ್ಲಿ ನಮ್ಮ ಮಕ್ಕಳು ಹಾಗೂ ಜೀವ ಸಂಕುಲ ಗಂಭೀರ ಸಮಸ್ಯೆ ಎದುರಿಸಬೇಕಾಗುತ್ತದೆ. ಹೀಗಾಗಿ ಜಾಗತಿಕ ಮಟ್ಟದಲ್ಲಿ ಇದರ ಪರಿಣಾಮಗಳನ್ನು ಎದುರಿಸುವ ಕಾರ್ಯಕ್ರಮಗಳನ್ನು ರೂಪಿಸುವ ಜತೆಗೆ ದೇಶದಲ್ಲಿ ತುರ್ತಾಗಿ ಪರಿಸರ ರಕ್ಷಣೆ ಸಂಬಂಧ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಎಲ್ಲ ಜನಪ್ರತಿನಿಧಿಗಳು ಪಕ್ಷಬೇಧ ಮರೆತು ಈ ಬಗ್ಗೆ ಯೋಚಿಸಬೇಕಿದೆ ಎಂದು ಸಂಘಟನೆ ಮನವಿ ಮಾಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts