More

    ಸಂವಿಧಾನ ಜಾಗೃತಿ ರಥಕ್ಕೆ ಸ್ವಾಗತ

    ಮೇಲುಕೋಟೆ: ಸಂವಿಧಾನದಿಂದ ಭಾರತೀಯರೆಲ್ಲರಿಗೂ ಸಮಾನ ಅವಕಾಶ ದೊರೆಯುವಂತಾಗಿದೆ ಎಂದು ಶಿಕ್ಷಣ ಸಂಯೋಜಕ ಶ್ರೀನಿವಾಸ್ ತಿಳಿಸಿದರು.

    ಮೇಲುಕೋಟೆಯಲ್ಲಿ ಸಂವಿಧಾನ ಜಾಗೃತಿ ರಥದ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಜಾರಿಯಾದನಂತರ ಮಹಿಳೆಯರು ಹಾಗೂ ಶೋಷಿತವರ್ಗದವರಿಗೆ ಹೆಚ್ಚಿನ ಅವಕಾಶ ಲಭಿಸಿದೆ. ಉಚಿತ ಶಿಕ್ಷಣ, ಆರೋಗ್ಯ ಸೇವೆ ಎಲ್ಲರಿಗೂ ಲಭಿಸುತ್ತಿದೆ. ವಿದ್ಯಾರ್ಥಿಗಳಾದಿಯಾಗಿ ಎಲ್ಲರೂ ಸಂವಿಧಾನದ ಆಶಯಗಳನ್ನು ಸಮರ್ಪಕವಾಗಿ ಅಳವಡಿಸಿಕೊಂಡರೆ, ಭವ್ಯ ಭಾರತ ನಿರ್ಮಾಣವಾಗಲಿದೆ. ಅಂಬೇಡ್ಕರ್ ವಿಶ್ವದ ಎಲ್ಲ ದೇಶದ ಸಂವಿಧಾನವನ್ನೂ ಅಧ್ಯಯನ ಮಾಡಿ ಭಾರತಕ್ಕೆ ಶ್ರೇಷ್ಠ ಸಂವಿಧಾನದ ಕೊಡುಗೆ ನೀಡಿದ್ದಾರೆ. ದೇಶದ ಸಂವಿಧಾನದ ಮಹತ್ವದ ಬಗ್ಗೆ ಪ್ರತಿ ಹಳ್ಳಿಯಲ್ಲೂ ಜಾಗೃತಿ ಮೂಡಿಸಲು ಸಂವಿಧಾನ ಜಾಗೃತಿ ರಥ ಸಂಚರಿಸುತ್ತಿದೆ ಎಂದರು.

    ಮೇಲುಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಸೋಮಶೇಖರ್, ಉಪಾಧ್ಯಕ್ಷ ತಿರುಮಲೆ, ಸದಸ್ಯ ಜಿ.ಕೆ ಕುಮಾರ್ ಗ್ರಾಮ ಪಂಚಾಯಿತಿ ಆವರಣಕ್ಕೆ ಆಗಮಿಸಿದ ಸಂವಿಧಾನ ಜಾಗೃತಿ ರಥವನ್ನು ಸ್ವಾಗತಿಸಿದರು.

    ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲೇಶ್, ಮೇಲುಕೋಟೆ ಗ್ರಾಪಂ ಸದಸ್ಯರಾದ ಹೊಸಹಳ್ಳಿ ಜಯರಾಮ್, ಜಿ.ಕೆ.ಕುಮಾರ್, ವಸತಿ ಶಾಲೆ ಪ್ರಾಂಶುಪಾಲ ಗಂಗೇಶ್, ಯದುಶೈಲ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಸಂತಕುಮಾರ್, ಶಿಕ್ಷಕರಾದ ಗುರುದೇವ್, ನಾಯಕ, ಶಿವಣ್ಣ, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಲೋಕೇಶ್, ಕೋಮಲಾ, ಜಯರಾಮು, ದಶವಂತಕುಮಾರ್, ರೂಪಾ, ಶಶಿಕುಮಾರ್, ಪಿಡಿಒ ರಾಜೇಶ್ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts