16 C
Bangalore
Saturday, December 7, 2019

ಸವದಿಗೆ ಜಾರಕಿಹೊಳಿ ಬ್ರದರ್ಸ್ ಅಡ್ಡಗಾಲು

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

|ರಾಯಣ್ಣ ಆರ್.ಸಿ. ಬೆಳಗಾವಿ

ಜಿಲ್ಲಾ ರಾಜಕಾರಣದಲ್ಲಿ ತಮ್ಮದೇ ಹಿಡಿತ ಸಾಸುವುದಕ್ಕಾಗಿ ಅನೇಕ ರಾಜಕೀಯ ಕುಟುಂಬಗಳು ತೆರೆ-ಮರೆಯಲ್ಲಿ ಕಸರತ್ತು ನಡೆಸುತ್ತಿದ್ದು, ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬೇರೆ ಜಿಲ್ಲೆಯವರ ಪಾಲಾಗಿದೆ.
ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಅವರಿಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಹೊಣೆ ಹೊರಿಸಲಾಗಿದೆ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಲು ಬಿಜೆಪಿ ಹೈಕಮಾಂಡ್ ಮುಂದಾಗಿತ್ತಾದರೂ, ಜಾರಕಿಹೊಳಿ ಸಹೋದರರು ಅಡ್ಡಗಾಲು ಹಾಕಿದ್ದರಿಂದ ಲಕ್ಷ್ಮಣ ಸವದಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಕೈತಪ್ಪಿದ್ದು, ಅವರಿಗೆ ಬಳ್ಳಾರಿ -ಕೊಪ್ಪಳ ಉಸ್ತುವಾರಿ ನೀಡಲಾಗಿದೆ.
ಮತ್ತೊಂದೆಡೆ ಸುಪ್ರೀಂಕೋರ್ಟ್‌ನಲ್ಲಿ ಅನರ್ಹ ಶಾಸಕರ ಕುರಿತು ಇನ್ನೂ ಯಾವುದೇ ತೀರ್ಮಾನ ಪ್ರಕಟಗೊಳ್ಳದ ಹಿನ್ನೆಲೆಯಲ್ಲಿ ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಾಗ ಅಡ್ಡಿಯಾಗದಿರಲಿ ಎಂಬ ಕಾರಣಕ್ಕಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಕೆಎಂಎ್ ಅಧ್ಯಕ್ಷ ಪದವಿ ನೀಡಿ ಸಮಾಧಾನಪಡಿಸಲಾಗಿದೆ.

ಹುಕ್ಕೇರಿಯ ಕತ್ತಿ ಸಹೋದರರ ಪೈಕಿ ಶಾಸಕ ಉಮೇಶ ಕತ್ತಿ ಅವರಿಗೂ ಶೀಘ್ರ ಸಚಿವ ಸ್ಥಾನ ಲಭಿಸಲಿದೆ ಎಂಬುದು ಮುಖ್ಯಮಂತ್ರಿ ಬಿಎಸ್‌ವೈ ಆಪ್ತರು ಹೇಳುತ್ತಿದ್ದಾರೆ. ಜೊಲ್ಲೆ ದಂಪತಿ ಕೂಡ ಉಸ್ತುವಾರಿ ಸ್ಥಾನಕ್ಕಾಗಿ ಪ್ರಯತ್ನ ನಡೆಸಿದ್ದರೂ, ಕೊನೆ ಗಳಿಗೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಜವಾಬ್ದಾರಿ ನೀಡಲಾಗಿದೆ. ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ಜಾರಕಿಹೊಳಿ ಸಹೋದರರು, ಕತ್ತಿ ಸಹೋದರರು, ಮತ್ತು ಸವದಿ ಅವರ ನಡುವೆ ಉಂಟಾಗಿದ್ದ ವೈಮನಸ್ಸು ಈಗಲೂ ಮುಂದುವರಿದಿದೆ.ಜಿಲ್ಲಾ ರಾಜಕಾರಣದಲ್ಲಿ ಹಿಡಿತ ಹೊಂದಿದ್ದ ಜಾರಕಿಹೊಳಿ ಸಹೋದರರ ಪ್ರಾಬಲ್ಯ ಕಡಿಮೆಯಾಗುತ್ತಿರುವುದೇ ಇದಕ್ಕೆ ಪ್ರಮುಖ ಕಾರಣ.

ಕಳೆದ ಬಾರಿ ನಡೆದ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯ ಲಿತಾಂಶದ ಅಂಕಿ-ಅಂಶಗಳೇ ಇದಕ್ಕೆ ಪುಷ್ಟಿ ನೀಡುತ್ತಿವೆ. 30 ವರ್ಷಗಳಲ್ಲಿ ಜಾರಕಿಹೊಳಿ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಲಾಗಿದ್ದು, ಅದನ್ನು ಕುಸಿಯಲು ಬಿಡುವುದಿಲ್ಲ ಎಂದು ಬಾಲಚಂದ್ರ ಜಾರಕಿಹೊಳಿ ಅವರು ಬಹಿರಂಗವಾಗಿಯೇ ಹೇಳಿದ್ದನ್ನು ಸ್ಮರಿಸಬಹುದು.

ಮುಂಬರುವ ಉಪಚುನಾವಣೆ ಮೇಲೆ ಕಣ್ಣಿಟ್ಟಿರುವ ಜಾರಕಿಹೊಳಿ ಸಹೋದರರು, ತಮ್ಮ ಮತಬ್ಯಾಂಕ್ ಭದ್ರ ಪಡಿಸಿಕೊಳ್ಳುವುದಕ್ಕಾಗಿ ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ. ರಮೇಶ ಜಾರಕಿಹೊಳಿ ಅವರ ಅಳಿಯ ಅಂಬಿರಾವ್ ಪಾಟೀಲಕೂಡ ಮುಂಚೂಣಿಯಲ್ಲಿ ನಿಂತು ಸೋದರ ಮಾವನ ಪರವಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಇದು ಸ್ವಾಭಾವಿಕವಾಗಿ ಲಖನ್ ಜಾರಕಿಹೊಳಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಲಖನ್ ಜಾರಕಿಹೊಳಿಗೆ ಅವರನ್ನು ಯಾವ ಕ್ಷೇತ್ರದಿಂದ ಕಣಕ್ಕೆ ಇಳಿಸುತ್ತಾರೆ ಎಂಬುದು ಕೂಡ ಇನ್ನೂ ನಿಗೂಢವಾಗಿದೆ. ಬಿಜೆಪಿಯಿಂದ ಶಾಸಕನಾಗಬೇಕು ಎನ್ನುವ ಕನಸು ಕಾಣುವ ಗೋಕಾಕ ಬಿಜೆಪಿ ಮುಖಂಡ ಅಶೋಕ ಪೂಜಾರಿ ಅವರ ಕನಸು ನನಸಾಗುವುದೇ ಎಂದು ಕನವರಿಸುತ್ತಿದ್ದಾರೆ. ಆದರೆ ರಮೇಶ ಜಾರಕಿಹೊಳಿ ಅವರು ಬಿಜೆಪಿ ಕದ ತಟ್ಟಿರುವುದರಿಂದ ಜಾರಕಿಹೊಳಿ ಸಹೋದರರ ರೊಟ್ಟಿ ಜಾರಿ ತುಪ್ಪದಲ್ಲಿ ಬಿದ್ದಂತಾಗಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆಗಳು ಆಗುವುದಂತೂ ಖಚಿತ.

ನನಗೆ ಯಾವುದೇ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿ ನೀಡಿದರೂ ಅದನ್ನು ಸಮರ್ಥವಾಗಿ ನಿಭಾಯಿಸುವೆ. ಹೈಕಮಾಂಡ್ ನೀಡಿರುವ ಆದೇಶ ಪಾಲಿಸುತ್ತ ಪಕ್ಷದ ಬೆಳವಣಿಗೆಗೆ ಶ್ರಮಿಸುವುದರ ಜತೆಗೆ ಜನರ ಸೇವೆ ಮಾಡುವೆ.
|ಲಕ್ಷ್ಮಣ ಸವದಿ ಉಪಮುಖ್ಯಮಂತ್ರಿ

ಹೈಕಮಾಂಡ್ ತಮಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ನೀಡಿದೆ. ನನ್ನ ರಾಜಕೀಯ ಅನುಭವದಿಂದ ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಕೈಗೊಳ್ಳುವುದರ ಜತೆಗೆ ಬಿಜೆಪಿ ಬಲಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುವೆ. ಮುಂದಿನ ವಾರದಲ್ಲಿ ಬೆಳಗಾವಿಗೆ ಭೇಟಿ ನೀಡಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸುವೆ.
ಜಗದೀಶ ಶೆಟ್ಟರ್
|ಬೃಹತ್ ಕೈಗಾರಿಕೆ ಸಚಿವ, ಬೆಳಗಾವಿ ಜಿಲ್ಲಾ ಉಸ್ತುವಾರಿ

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...