

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಚುನಾವಣಾ ಬಾಂಡ್‌ಗಳ ವಿವರಗಳನ್ನು ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಿ ಮಂಗಳವಾರ ಸಂಜೆ ಚುನಾವಣಾ ಆಯೋಗಕ್ಕೆ ಚುನಾವಣಾ ಬಾಂಡ್‌ಗಳ ವಿವರಗಳನ್ನು ಸಲ್ಲಿಸಿದೆ.
ನ್ಯಾಯಾಲಯದ ಆದೇಶದಂತೆ ಶುಕ್ರವಾರ ಸಂಜೆ 5 ಗಂಟೆಯೊಳಗೆ ಚುನಾವಣಾ ಆಯೋಗವು ಮಾಹಿತಿಗಳನ್ನು ಕ್ರೋಢೀಕರಿಸಿ ಬಿಡುಗಡೆ ಮಾಡಬೇಕಿದೆ. ಆದಾಗ್ಯೂ ಬ್ಯಾಂಕಿನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ನ್ಯಾಯಾಲಯದ ಆದೇಶದ ಪಾಲನೆಯನ್ನು ದೃಢೀಕರಿಸುವ ಅಫಿಡವಿಟ್ ಸಲ್ಲಿಸಿಲ್ಲ.
ಮಾರ್ಚ್ 12 (ಇಂದು) ಮಂಗಳವಾರದೊಳಗೆ ಚುನಾವಣಾ ಬಾಂಡ್ ಖರೀದಿಸಿದವರ ಹಾಗೂ ಅವುಗಳನ್ನು ನಗದೀಕರಿಸಿ ಕೊಂಡರಾಜಕೀಯ ಪಕ್ಷಗಳ ವಿವರವನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸುವಂತೆ ಸುಪ್ರೀಂಕೋರ್ಟ್ ತಾಕೀತು ಮಾಡಿತ್ತು. ನ್ಯಾಯಾಲಯದ ಆದೇಶದ ಸೂಚನೆಯಂತೆ ಚುನಾವಣಾ ಆಯೋಗವು ಮಾರ್ಚ್ 15 ಸಂಜೆ 5 ಗಂಟೆಯೊಳಗೆ ಎಸ್‌ಬಿಐ ಬ್ಯಾಂಕ್ ಹಂಚಿಕೊಂಡ ವಿವರಗಳನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು ಆದೇಶ ಮಾಡಿದೆ.
ಎಸ್‌ಬಿಐ ಸುಪ್ರೀಂ ಕೋರ್ಟ್‌ನ ಆದೇಶಗಳನ್ನು ಪಾಲಿಸಿ ಚುನಾವಣಾ ಬಾಂಡ್‌ಗಳ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ ಎಂದು ವರದಿಯಾಗಿದೆ.
20019ರ ಏ.12ರಿಂದ ಈವರೆಗೆ ಚುನಾವಣಾ ಬಾಂಡ್ ಖರೀದಿಸಿದವರ ವಿವರವನ್ನು ಮಾರ್ಚ್ 6ರೊಳಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಸಲ್ಲಿಸು ವಂತೆ ಸುಪ್ರೀಂಕೋರ್ಟ್ ಫೆ.15ರಂದು ಚುನಾವಣಾ ಬಾಂಡ್ ರದ್ದುಪಡಿಸುವ ಆದೇಶ ದೊಂದಿಗೆ ತಾಕೀತು ಮಾಡಿತ್ತು. ಅದನ್ನು ಜೂ.30ರ ವರೆಗೆ ವಿಸ್ತರಿಸುವಂತೆ ಎಸ್‌ಬಿಐ ಅರ್ಜಿ ಸಲ್ಲಿಸಿತ್ತು.
ಸೋಮವಾರ ಅದರ ವಿಚಾರಣೆ ನಡೆಸಿದ ಮುಖ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಸಾಂವಿಧಾನಿಕ ಪೀಠ, ಮಾ.12ರ ವ್ಯವಹಾರದ ಅವಧಿ ಮುಗಿಯುವುದರೊಳಗೆ ಆಯೋಗಕ್ಕೆ ಎಸ್‌ಬಿಐ ವಿವರಸಲ್ಲಿಸಬೇಕು. ಚುನಾವಣಾ ಆಯೋಗವು ಮಾ.15ರ ಸಂಜೆ 5 ಗಂಟೆಯೊಳಗೆ ಅದನ್ನು ತನ್ನ ಅಧಿಕೃತ ವೆಬ್ ಸೈಟಿನಲ್ಲಿ ಪ್ರಕಟಿಸಬೇಕು ಎಂದು ಆದೇಶ ನೀಡಿತು.
'ಎಸ್‌ಬಿಐ ಪರ ವಕೀಲರು ಮಂಡಿಸಿದ ವಾದವನ್ನು ಗಮನಿಸಿದರೆ ನಾವು ಕೇಳಿರುವ ವಿವರಗಳು ಎಸ್‌ಬಿಐ ಬಳಿ ಸಿದ್ಧ ರೂಪದಲ್ಲಿ ಲಭ್ಯವಿವೆ ಎಂಬುದು ತಿಳಿಯುತ್ತದೆ. ಹೀಗಾಗಿ ಕೂಡಲೇ ಅದನ್ನು ಸಲ್ಲಿಸಬೇಕು. ಆದೇಶ ಪಾಲಿಸಿದ್ದರ ಬಗ್ಗೆ ಎಸ್‌ಬಿಐ ಚೇರ್ಮನ್ ಅಫಿಡವಿಟ್ ಸಲ್ಲಿಸಬೇಕು' ಎಂದು ಕೋರ್ಟ್ ಸೂಚಿಸಿತು. ಇದೇ ವೇಳೆ, ಕೋರ್ಟ್‌ನ ಆದೇಶ ಪಾಲಿಸದ ಎಸ್‌ಬಿಐ, ವಿರುದ್ಧ ಸಲ್ಲಿಕೆಯಾದ ನ್ಯಾಯಾಂಗ ನಿಂದನೆ ಅರ್ಜಿ ಯನ್ನೂ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿತು.