ಅತ್ಯಾಚಾರಕ್ಕೊಳಗಾದ 14 ವರ್ಷದ ಅಪ್ರಾಪ್ತೆಯ ಗರ್ಭಪಾತಕ್ಕೆ ಸುಪ್ರೀಂಕೋರ್ಟ್​ ಅನುಮತಿ!

sc
Published on

ನವದೆಹಲಿ: ಅತ್ಯಾಚಾರಕ್ಕೊಳಗಾದ 14 ವರ್ಷದ ಅಪ್ರಾಪ್ತೆಗೆ ಗರ್ಭಪಾತ (30 ವಾರ) ಮಾಡಿಸಿಕೊಳ್ಳಲು ಸುಪ್ರೀಂಕೋರ್ಟ್​ ಸೋಮವಾರ ಆದೇಶಿಸಿದೆ.

ಅಪ್ರಾಪ್ತೆಯ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಬಾಂಬೆ ಹೈಕೋರ್ಟ್ ಆದೇಶವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್ ಗರ್ಭಾವಸ್ಥೆಯನ್ನು ಮುಂದುವರಿಸುವುದರಿಂದ ಬಾಲಕಿಯ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಹಾನಿಯಾಗಬಹುದು ಎಂದು ಒತ್ತಿ ಹೇಳಿದೆ.

ಬಾಲಕಿಗೆ ಪ್ರತಿ ಗಂಟೆಯು ನಿರ್ಣಾಯಕವಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ನೇತೃತ್ವದ ಪೀಠವು ಅಪ್ರಾಪ್ತ ವಯಸ್ಕರಿಗೆ ಸುರಕ್ಷಿತ ಗರ್ಭಪಾತಕ್ಕೆ ನಿರ್ದೇಶನ ನೀಡಿದೆ. ಗರ್ಭಪಾತಕ್ಕೆ ತಜ್ಱ ವೈದ್ಯಕೀಯ ತಂಡದ ಮೂಲಕ ಗರ್ಭಪಾತ ಮಾಡಿಸುವಂತೆ ಮುಂಬೈನ ಲೋಕಮಾನ್ಯ ತಿಲಕ್​ ಆಸ್ಪತ್ರೆಯ ಡೀನ್​ ಅವರಿಗೆ ನಿರ್ದೇಶನ ನೀಡಿರುವುದಾಗಿ ವರದಿಯಾಗಿದೆ.

ಆಸ್ಪತ್ರೆಯು ವೈದ್ಯಕೀಯ ಸೌಲಭ್ಯದೊಂದಿಗೆ ಅಪ್ರಾಪ್ತೆಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಹಾಗೂ ಪ್ರಕ್ರಿಯೆಗಳ ವೆಚ್ಚಗಳನ್ನು ಮಹಾರಾಷ್ಟ್ರ ಸರ್ಕಾರ ವಹಿಸಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿತು.

ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಬಾಂಬ್ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಬಾಲಕಿಯ ತಾಯಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದರು. ಮೆಡಿಕಲ್​ ಟರ್ಮಿನೇಶನ್​ ಆಫ್ ಪ್ರೆಗ್ನೇನ್ಸಿ ಕಾಯ್ದೆ ಪ್ರಕಾರ 24 ವಾರಗಳ ಗರ್ಭಿಣಿ ಗರ್ಭಪಾತ ಮಾಡಲು ಅವಕಾಶ ನೀಡಲಾಗುತ್ತದೆ. ವಿವಾಹಿತ ಅಥವಾ ಅತ್ಯಾಚಾರ ಅಪ್ರಾಪ್ತೆಯಂತಹ ಪ್ರಕರಣಗಳಿಗೆ ಇದು ಅನ್ವಯವಾಗಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net