More

    ಶಿವಸೇನೆ ಶಾಸಕರ ಅನರ್ಹ ಪ್ರಕ್ರಿಯೆಗೆ ಸುಪ್ರೀಂಕೋರ್ಟ್​ ತಡೆ: ವಿಚಾರಣೆ ಮುಂದೂಡಿಕೆ

    ನವದೆಹಲಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿದ್ದ ಶಿವಸೇನೆಯ ಶಾಸಕರನ್ನು ಅನರ್ಹಗೊಳಿಸುವ ಪ್ರಕ್ರಿಯೆಗೆ ಸೋಮವಾರ ಸುಪ್ರೀಂಕೋರ್ಟ್​ ತಡೆ ನೀಡಿದೆ.

    ಮುಖ್ಯ ನ್ಯಾಯಮೂರ್ತಿಗಳಾದ ಎನ್​. ವಿ ರಮಣ್​, ನ್ಯಾ. ಕೃಷ್ಣ ಮುರಾರಿ, ಮತ್ತು ನ್ಯಾ.ಹಿಮಾ ಕೊಹ್ಲಿ ಅವರಿದ್ದ ತ್ರಿ ಸದಸ್ಯ ಪೀಠ ಪ್ರಕರಣದ ವಿಚಾರಣೆಯನ್ನು ಮತ್ತೆ ಮುಂದೂಡಿದೆ. ಹೊಸ ಪೀಠ ರಚಿಸುವವರೆಗೆ ಶಾಸಕರ ವಿರುದ್ಧ ಯಾವುದೇ ಕ್ರಮ ಅಥವಾ ವಿಚಾರಣೆಯನ್ನು ತೆಗೆದುಕೊಳ್ಳಬಾರದು ಎಂದು ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ ರಾಹುಲ್ ನಾರ್ವೇಕರ್ ಅವರಿಗೆ ತಿಳಿಸುವಂತೆ ನ್ಯಾಯಾಲಯವು ಅರ್ಜಿದಾರರರಿಗೆ ಸೂಚಿಸಿದೆ.

    ಉದ್ಧವ್ ಠಾಕ್ರೆ ಬಣದ ಪರ ವಾದ ಮಂಡಿಸಿದ ಕಪಿಲ್ ಸಿಬಲ್, ಏಕನಾಥ್ ಶಿಂಧೆ ಅವರ 39 ಶಾಸಕರ ಅನರ್ಹತೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ಜುಲೈ 27ರಂದು ನಡೆಯಲಿದೆ ಎಂದು ತಿಳಿಸಿದ್ದಾರೆ. ರಾಜ್ಯಪಾಲರ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಈ ಕುರಿತು ಸ್ಪೀಕರ್‌ಗೆ ತಿಳಿಸುವುದಾಗಿ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದರು. (ಏಜೆನ್ಸೀಸ್​)

    ಮಧ್ಯರಾತ್ರಿಯಲ್ಲಿ ಕೇರಳದ ಲೂ ಲೂ ಮಾಲ್​ನಲ್ಲಿ ಜನವೋ ಜನ, ಸಿಬ್ಬಂದಿಯೇ ಶಾಕ್​​! ಕಾರಣ ಇಲ್ಲಿದೆ

    VIDEO: ಸಮುದ್ರ ತೀರದಲ್ಲಿ ಮೋಜು ಮಸ್ತಿಯಲ್ಲಿದ್ದ ಜನರನ್ನು ಓಡಿಸುತ್ತಿರುವ ಸೀ ಲಯನ್​! ಜಾಲತಾಣದಲ್ಲಿ ಭಾರೀ ಮೆಚ್ಚುಗೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts