23.2 C
Bangalore
Saturday, December 14, 2019

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯನ್ನು ಏಮ್ಸ್​ಗೆ ಸ್ಥಳಾಂತರಿಸಿ, 25 ಲಕ್ಷ ರೂ. ಪರಿಹಾರ ನೀಡಲು ಸುಪ್ರೀಂಕೋರ್ಟ್ ಆದೇಶ​

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ನವದೆಹಲಿ: ದೇಶದ ಜನತೆಯನ್ನು ಬೆಚ್ಚಿಬೀಳಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಮೇಲಿನ ಅಪಘಾತ ಪ್ರಕರಣ ಕುರಿತು ಸುಪ್ರೀಂ ಕೋರ್ಟ್ ಗುರುವಾರ ಆದೇಶವೊಂದನ್ನು ಹೊರಡಿಸಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡಿರುವ ಸಂತ್ರಸ್ತೆಯನ್ನು ಉತ್ತರ ಪ್ರದೇಶದ ಕಿಂಗ್​ ಜಾರ್ಜ್​ ವೈದ್ಯಕೀಯ ಆಸ್ಪತ್ರೆಯಿಂದ ದೆಹಲಿಯ ಏಮ್ಸ್​ ಆಸ್ಪತ್ರೆಗೆ ಸ್ಥಳಾಂತರಿಸಲು ಹೇಳಿದೆ.

ಇಷ್ಟೇ ಅಲ್ಲದೇ ಸಂತ್ರಸ್ತೆಗೆ ಪರಿಹಾರ ಹಣವನ್ನಾಗಿ 25 ಲಕ್ಷ ರೂ. ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನ್ಯಾಯಾಲಯ ಆದೇಶಿಸಿದ್ದು, ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಂತ್ರಸ್ತೆ ಪರ ವಕೀಲರನ್ನು ಕೂಡ ಏಮ್ಸ್​ ಆಸ್ಪತ್ರೆಗೆ ಸ್ಥಳಾಂತರಿಸಿ, 20 ಲಕ್ಷ ರೂ. ಪರಿಹಾರ ನೀಡುವಂತೆ ತಿಳಿಸಿದೆ.

ಈಗಾಗಲೇ ಉನ್ನಾವೋ ಅತ್ಯಾಚಾರ ಸಂಬಂಧಿಸಿದ ಪ್ರಕರಣಗಳನ್ನು ಉತ್ತರ ಪ್ರದೇಶದ ಲಖನೌನಿಂದ ದೆಹಲಿಗೆ ಸುಪ್ರೀಂ ಕೋರ್ಟ್‌ ವರ್ಗಾಯಿಸಿದೆ. ಪ್ರಕರಣದ ವಿಚಾರಣೆಗೆ ನ್ಯಾಯಾಧೀಶರೊಬ್ಬರನ್ನು ನಿಯೋಜಿಸಲಾಗಿದ್ದು, ದೂರಿನ ಆಧಾರದ ಮೇಲೆ ಪ್ರತಿದಿನ ವಿಚಾರಣೆ ನಡೆಯಲಿದೆ. 45 ದಿನಗಳ ಒಳಗೆ ವಿಚಾರಣೆ ಮುಗಿಸುವಂತೆ ಕೋರ್ಟ್​ ಸೂಚಿಸಿದೆ.

ಜುಲೈ 28ರ ಭಾನುವಾರ ಉನ್ನೋವೋ ಅತ್ಯಾಚಾರ ಸಂತ್ರಸ್ತೆ, ಆಕೆಯ ಪರ ವಕೀಲ ಮಹೇಂದ್ರ ಸಿಂಗ್​, ತಾಯಿ ಮತ್ತು ಆಕೆಯ ಚಿಕ್ಮಮ್ಮ ರಾಯ್​ಬರೇಲಿ ಜೈಲಿನಲ್ಲಿರುವ ಚಿಕ್ಕಪ್ಪ ಮಹೇಶ್​ ಸಿಂಗ್​ರನ್ನು ಭೇಟಿ ಮಾಡಲು ಕಾರಿನಲ್ಲಿ ತೆರಳುವಾಗ ರಸ್ತೆ ತಿರುವಿನಲ್ಲಿ ಅಪಘಾತ ಸಂಭವಿಸಿತ್ತು.

ಕಾರು ಮತ್ತು ಟ್ರಕ್​ ನಡುವೆ ಸಂಭವಿಸಿದ ಅಪಘಾತದಲ್ಲಿ ಸಂತ್ರಸ್ತೆ ಮತ್ತು ವಕೀಲರು ಗಂಭೀರ ಗಾಯಗೊಂಡಿದ್ದರು. ಬಳಿಕ ಈ ಘಟನೆ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿತು. ಈಗಾಗಲೇ ಜೈಲಿನಲ್ಲಿರುವ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಹಾಗೂ ಬಿಜೆಪಿ ಶಾಸಕ ಕುಲದೀಪ್​ ಸಿಂಗ್​ ಸೆಂಗಾರ್​ ವಿರುದ್ಧ ಅಪಘಾತ ಮಾಡಿಸಿದ ಆರೋಪ ಕೇಳಿಬಂದಿದೆ. ಅಲ್ಲದೆ, ಶಾಸಕರ ಬೆಂಬಲಿಗರಿಂದ ಜೀವ ಬೆದರಿಕೆ ಇದೆ ಎಂದು ಸಂತ್ರಸ್ತೆ ಕುಟುಂಬದವರು ಹೇಳಿಕೆ ನೀಡಿದ್ದಾರೆ. ಪ್ರಕರಣದಿಂದ ತೀವ್ರ ಮುಜುಗರಕ್ಕೀಡಾಗಿರುವ ಬಿಜೆಪಿ, ಶಾಸಕ ಕುಲದೀಪ್​ನನ್ನು ಪಕ್ಷದಿಂದಲೇ ಉಚ್ಚಾಟನೆ ಮಾಡಿದೆ.

ಘಟನೆ ಹಿನ್ನೆಲೆ
ಅತ್ಯಾಚಾರ ಸಂತ್ರಸ್ತೆ ತನ್ನ ಮೇಲಿನ ಕ್ರೌರ್ಯವನ್ನು ವಿರೋಧಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್​ ನಿವಾಸದ ಮುಂದೆ ಆತ್ಮಹತ್ಯೆಗೆ ಯತ್ನಿಸಿದಾಗ ಪ್ರಕರಣ ಬೆಳಕಿಗೆ ಬಂದು ಸುದ್ದಿ ಮಾಧ್ಯಮಗಳಲ್ಲಿ ಸಾಕಷ್ಟು ಸುದ್ದಿಯಾಗಿತ್ತು. ಕೆಲಸಕ್ಕಾಗಿ ಮನವಿ ಮಾಡಲು ಶಾಸಕರ ಮನೆಗೆ ತೆರಳಿದ್ದಾಗ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿ ಸಂತ್ರಸ್ತೆ ನ್ಯಾಯಕ್ಕಾಗಿ ಅಂಗಲಾಚಿದ್ದಳು. ಉತ್ತರ ಪ್ರದೇಶದ ಬ್ಯಾಂಗರ್ಮೌ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದ ಆರೋಪಿ ಸೆಂಗಾರ್​ನನ್ನು ಕಳೆದ ವರ್ಷ ಏಪ್ರಿಲ್​ 13ರಂದು ಬಂಧಿಸಲಾಗಿತ್ತು. (ಏಜೆನ್ಸೀಸ್​)

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...