More

    ಶಿವಸೇನೆ, ಎನ್‌ಸಿಪಿ ಶಾಸಕರ ಅನರ್ಹತೆ ಅರ್ಜಿಗಳ ಇತ್ಯರ್ಥಕ್ಕೆ ಮಹಾರಾಷ್ಟ್ರ ಸ್ಪೀಕರ್‌ಗೆ ಸುಪ್ರೀಂ ಗಡುವು

    ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಅವರನ್ನು ಬೆಂಬಲಿಸುತ್ತಿರುವ ಶಾಸಕರ ವಿರುದ್ಧದ ಅನರ್ಹತೆ ಅರ್ಜಿಗಳನ್ನು ಡಿ.31ರೊಳಗೆ ಇತ್ಯರ್ಥಪಡಿಸುವಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರಿಗೆ ಸುಪ್ರೀಂಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

    ಇದನ್ನೂ ಓದಿ: ಮದುವೆಯಾದ 12 ಗಂಟೆಯೊಳಗೆ ವರನಿಗೆ ತ್ರಿವಳಿ ತಲಾಖ್ ನೀಡಿದ ವಧು
    ಅನರ್ಹತೆ ಅರ್ಜಿಗಳ ತೀರ್ಪನ್ನು ವಿಳಂಬ ಮಾಡಿದ್ದಕ್ಕಾಗಿ ನ್ಯಾಯಾಲಯವು ನಾರ್ವೇಕರ್ ಅವರನ್ನು ತರಾಟೆಗೆ ತೆಗೆದುಕೊಂಡಿತು. ಅರ್ಜಿಗಳ ತ್ವರಿತ ವಿಲೇವಾರಿ ಮಾಡಲು ಸ್ಪೀಕರ್ ವಿಫಲವಾದರೆ ಸಮಯವನ್ನು ನಿಗದಿಪಡಿಸುವುದಾಗಿ ನ್ಯಾಯಾಲಯ ಹೇಳಿದೆ.

    ಮುಂದಿನ ವಿಧಾನಸಭಾ ಚುನಾವಣೆಗೂ ಮುನ್ನ ಅನರ್ಹತೆ ಅರ್ಜಿಗಳ ಕುರಿತು ನಿರ್ಧಾರ ಕೈಗೊಳ್ಳಬೇಕು, ಇಲ್ಲದಿದ್ದರೆ ಇಡೀ ಪ್ರಕ್ರಿಯೆಯೇ ಅರ್ಥವಿಲ್ಲದಂತಾಗುತ್ತದೆ ಎಂದು ಕೋರ್ಟ್ ಎಚ್ಚರಿಕೆ ನೀಡಿದೆ. ಕಳೆದ ವರ್ಷ ಶಿಂಧೆ ಮತ್ತು 39 ಶಾಸಕರು ಶಿವಸೇನಾದಿಂದ ಬೇರ್ಪಟ್ಟು ಸರ್ಕಾರ ರಚಿಸಲು ಬಿಜೆಪಿಗೆ ಸೇರಿದ ನಂತರ ಶಿವಸೇನಾ ಬಣಗಳು ಪರಸ್ಪರ ಅನರ್ಹತೆ ಅರ್ಜಿಗಳನ್ನು ಸಲ್ಲಿಸಿದ್ದವು.

    ಜುಲೈನಲ್ಲಿ ಶಿಂಧೆ ನೇತೃತ್ವದ ಶಿವಸೇನೆಯ 40 ಶಾಸಕರು ಮತ್ತು ಠಾಕ್ರೆ ಬಣದ 14 ಶಾಸಕರಿಗೆ ಸ್ಪೀಕರ್ ಅವರು ತಮ್ಮ ವಿರುದ್ಧದ ಅನರ್ಹತೆ ಅರ್ಜಿಗಳಿಗೆ ಉತ್ತರ ನೀಡುವಂತೆ ನೋಟಿಸ್ ನೀಡಿದ್ದರು. ಒಟ್ಟು 54 ಶಾಸಕರ ವಿರುದ್ಧ ನೋಟಿಸ್ ಜಾರಿ ಮಾಡಲಾಗಿದೆ. ಆದರೆ ಕಳೆದ ವರ್ಷ ಶಿವಸೇನೆ ವಿಭಜನೆಯ ನಂತರ ಚುನಾಯಿತರಾದ ಶಿವಸೇನೆ ಶಾಸರಿಗೆ ನೋಟಿಸ್ ನೀಡಲಾಗಿಲ್ಲ.

    ಶೀಘ್ರದಲ್ಲೇ ಜಾತಿ ಗಣತಿ ವರದಿ ಸ್ವೀಕಾರ: ಸಿಎಂ ಸಿದ್ದರಾಮಯ್ಯ ಪ್ರಕಟ; ಮೆಡಿಕಲ್ ಸೀಟು ಉಚಿತ ಅಸಾಧ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts