More

    ಸನಾತನ ಧರ್ಮದ ಬಗ್ಗೆ ಉದಯನಿಧಿ ಟೀಕೆ.. ಆಕ್ರೋಶ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್.. ಏನಿದು?

    #sc #tamil nadu #udhayanidhi stalin #sanatan dharma

    ನವದೆಹಲಿ: ಸನಾತನ ಧರ್ಮದ ನಿರ್ಮೂಲನೆಗೆ ಕರೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ ತಮ್ಮ ಮಾತಿನ ಪರಿಣಾಮಗಳನ್ನು ತಿಳಿದುಕೊಳ್ಳಬೇಕು, ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದು ಸರಿಯೇ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

    ಇದನ್ನೂ ಓದಿ:

    ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರನ್ನೊಳಗೊಂಡ ಪೀಠವು, “ಸಂವಿಧಾನದ 19(1)(ಎ) ನಿಧಿಯ ಹಕ್ಕನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ, ಸನಾತನ ಧರ್ಮದ ಬಗ್ಗೆ ನಿಮ್ಮ ಕಾಮೆಂಟ್‌ಗಳ ಪರಿಣಾಮ ಏನು ಎಂದು ನಿಮಗೆ ತಿಳಿದಿದೆಯೇ? ನೀವು ಸಾಮಾನ್ಯ ವ್ಯಕ್ತಿಯಲ್ಲ, ಸಚಿವ ಸ್ಥಾನದಲ್ಲಿರುವ ನೀವು ಇಂತಹ ಹೇಳಿಕೆಗಳನ್ನು ನೀಡಬಹುದೇ? ”ಎಂದು ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣವನ್ನು ಮಾರ್ಚ್ 15ಕ್ಕೆ ಮುಂದೂಡಿದೆ.

    ಏನಿದು ಪ್ರಕರಣ?:

    2023ರಲ್ಲಿ ನಡೆದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಉದಯನಿಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಸನಾತನ ಧರ್ಮ ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಇದನ್ನು ವಿರೋಧಿಸಬಾರದು, ನಿರ್ಮೂಲನೆ ಮಾಡಬೇಕು. ಡೆಂಗೆ, ಮಲೇರಿಯಾ, ಕರೋನಾವನ್ನು ಹರಡುವ ವೈರಸ್​, ಸೊಳ್ಳೆಗಳನ್ನು ನಾಷ ಮಾಡುವಂತೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

    ಅವರ ಹೇಳಿಕೆಗೆ ತಮಿಳುನಾಡು ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಇದಕ್ಕೆ ಉದಯನಿಧಿ ಸ್ಟಾಲಿನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ ಕಾನೂನು ಸಮರ ಎದುರಿಸಲೂ ಸಿದ್ಧ ಎಂದು ಹೇಳಿದ್ದು, ವಿವಾದವು ರಾಜಕೀಯ ತಿರುವು ಪಡೆದುಕೊಂಡು ಪ್ರತಿಭಟನೆಗಳು ನಡೆದವು. ವಿವಿಧೆಡೆ ಪ್ರಕರಣಗಳೂ ದಾಖಲಾಗಿದ್ದವು. ಅಂತಿಮವಾಗಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts