More

    ಶಿಷ್ಯೆಯ ಅತ್ಯಾಚಾರ ಪ್ರಕರಣ; ಅಸಾರಾಂ ಬಾಪುಗೆ ಸುಪ್ರೀಂ ಕೋರ್ಟ್‌ ಶಾಕ್​​​​​​​​, ಶಿಕ್ಷೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

    ನವದೆಹಲಿ: ಜೈಲು ಪಾಲಾಗಿರುವ ಅತ್ಯಾಚಾರ ಆರೋಪಿ ಅಸಾರಾಂ ಬಾಪುಗೆ ಸುಪ್ರೀಂ ಕೋರ್ಟ್ ದೊಡ್ಡ ಪೆಟ್ಟು ಕೊಟ್ಟಿದೆ. ವೈದ್ಯಕೀಯ ಕಾರಣಗಳಿಗಾಗಿ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವಂತೆ ಬಾಪು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಶಿಕ್ಷೆಗೆ ತಡೆ ನೀಡುವಂತೆ ರಾಜಸ್ಥಾನ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲು ನ್ಯಾಯಾಲಯ ಆದೇಶಿಸಿದೆ. ಅಲ್ಲದೆ ಪ್ರಕರಣದ ವಿಚಾರಣೆ ನಡೆಸುವಂತೆ ಹೈಕೋರ್ಟ್‌ಗೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ.

    ಮಹಾರಾಷ್ಟ್ರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾಗ ಆಯುರ್ವೇದ ಚಿಕಿತ್ಸೆ ಪಡೆಯಲು ತಮ್ಮ ಕಕ್ಷಿದಾರರಿಗೆ ಅವಕಾಶ ನೀಡುವಂತೆ ಅಸಾರಾಂ ಪರ ವಕೀಲರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ನಂತರ ನ್ಯಾಯಾಲಯವು ಈ ಮನವಿಯನ್ನು ರಾಜಸ್ಥಾನ ಹೈಕೋರ್ಟ್‌ಗೆ ಕೊಂಡೊಯ್ಯುವಂತೆ ವಕೀಲರಿಗೆ ಹೇಳಿದೆ.

    2023ರಲ್ಲಿ ಸುಪ್ರೀಂ ಕೋರ್ಟ್ ಅಸಾರಾಂಗೆ ಜಾಮೀನು ನೀಡಲು ನಿರಾಕರಿಸಿತ್ತು. ಇದಕ್ಕೂ ಮುನ್ನ ರಾಜಸ್ಥಾನ ಹೈಕೋರ್ಟ್ 2022ರಲ್ಲಿ ಜಾಮೀನು ನೀಡಲು ನಿರಾಕರಿಸಿತ್ತು. ಆಗ ಅಸಾರಾಂ ಪರ ವಕೀಲರು, ತಮ್ಮ ಕಕ್ಷಿದಾರರು ಕಳೆದ ಒಂಬತ್ತು ವರ್ಷಗಳಿಂದ ಜೈಲಿನಲ್ಲಿದ್ದಾರೆ ಮತ್ತು 80 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಕೇಳಿಕೊಂಡಿದ್ದರು.

    ಏನಿದು ಪ್ರಕರಣ?
    ಏಪ್ರಿಲ್ 2018 ರಲ್ಲಿ ರಾಜಸ್ಥಾನದ ಜೋಧ್‌ಪುರದ ನ್ಯಾಯಾಲಯವು 2013 ರಲ್ಲಿ ತನ್ನ ಆಶ್ರಮದಲ್ಲಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಆಸಾರಾಮ್‌ಗೆ ಜೀವಾವಧಿ ಶಿಕ್ಷೆ ವಿಧಿಸಿತು. ಇದೇ ಪ್ರಕರಣದಲ್ಲಿ ಅವರ ಇಬ್ಬರು ಸಹಚರರಿಗೆ ನ್ಯಾಯಾಲಯ 20 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಅಷ್ಟೇ ಅಲ್ಲ, 2023 ರ ಜನವರಿಯಲ್ಲಿ, 2013 ರಲ್ಲಿ ಗುಜರಾತ್‌ನ ಆಶ್ರಮವೊಂದರಲ್ಲಿ ಸೂರತ್‌ನ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಅಸಾರಾಂ ಶಿಕ್ಷೆಗೊಳಗಾದರು.

    ಜಪಾನಿಯರ ಈ ಸಲಹೆಗಳನ್ನು ಅನುಸರಿಸಿದರೆ 100 ವರ್ಷಗಳ ಕಾಲ ಸುಂದರವಾಗಿ ಬದುಕಬಹುದು!

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts