

ಕೋಟ: ಕೋಟತಟ್ಟು ಗ್ರಾಮ ಪಂಚಾಯಿತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಂದು ಕೊರತೆ ಗ್ರಾಮಸಭೆ ಬುಧವಾರ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ವಿದ್ಯಾರ್ಥಿ ವೇತನ, ವೈದ್ಯಕೀಯ ಸಹಾಯ ಧನ, ಮದುವೆಗೆ ಸಹಾಯಧನ ಮತ್ತು ಮನೆ ದುರಸ್ತಿಗೆ ಸಹಾಯಧನ ಚೆಕ್ ವಿತರಿಸಲಾಯಿತು. ಶೇ.25 ನಿಧಿಯಡಿ ಸ್ಟೀಲ್ ಡ್ರಮ್, ವಾಟರ್ ಟ್ಯಾಂಕ್ ಇತ್ಯಾದಿ ವೈಯಕ್ತಿಕ ಸಾಮಗ್ರಿ ವಿತರಣೆಗೆ ಗ್ರಾಮಸ್ಥರು ಬೇಡಿಕೆ ಸಲ್ಲಿಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಸತೀಶ್ ಕುಂದರ್ ಬಾರಿಕೆರೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ ವಾಸು ಪೂಜಾರಿ, ಪ್ರಕಾಶ್ ಹಂದಟ್ಟು, ರವೀಂದ್ರ ತಿಂಗಳಾಯ, ರಾಬರ್ಟ್ ರೋಡ್ರಿಗಸ್, ಕೆ.ಸೀತಾ, ವಿದ್ಯಾ, ಸಮಾಜ ಕಲ್ಯಾಣ ಇಲಾಖೆಯ ವಿಜಯಲಕ್ಷ್ಮೀ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರು ಮತ್ತು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾವ್ ನಿರೂಪಿಸಿದರು. ಕಾರ್ಯದರ್ಶಿ ಸುಮತಿ ಅಂಚನ್ ವಂದಿಸಿದರು.