More

    ಜ.೨೮ರಂದು ಶೋಷಿತ ಜಾಗೃತಿ ಸಮಾವೇಶ

    ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯ ಪೀಠದ ಪಕ್ಕದ ಮೈದಾನದಲ್ಲಿ ಜ.೨೮ರಂದು ಬೆಳಗ್ಗೆ ೧೧ಕ್ಕೆ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ, ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ ಶೋಷಿತ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜದ ನಾಯಕಿ ಪ್ರತಿಭಾ ಹೇಳಿದರು.

    ನಗರ ಪತ್ರಿಕಾಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ, ಹಿಂದುಳಿದ, ಆದಿವಾಸಿ, ಅಲೆಮಾರಿ, ಅಲ್ಪಸಂಖ್ಯಾತ ಮತ್ತು ಜನಪರ ಸಂಘಟನೆಗಳನ್ನೊಳಗೊಡ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟವು ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ ಶೋಷಿತ ಜಾಗೃತಿ ಸಮಾವೇಶದ ಅಂಗವಾಗಿ ೨೨ ಜಿಲ್ಲೆಗಳಲ್ಲಿ ಈಗಾಗಲೇ ಪ್ರಚಾರ ಕೈಗೊಂಡಿದ್ದು, ಎಲ್ಲೆಡೆ ವ್ಯಾಪಕ ಬೆಂಬಲ ಸಿಗುತ್ತಿದೆ ಎಂದರು.

    ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಅವರಿಗೂ ಸಮಾವೇಶಕ್ಕೆ ಆಗಮಿಸುವಂತೆ ಮನವಿ ಮಾಡಲಾಗಿದೆ. ಉಳಿದಂತೆ ಸರ್ವಪಕ್ಷಗಳ ಹಿಂದುಳಿದ ನಾಯಕರು, ಮುಖಂಡರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಭಾರತವು ಹಲವು ವೈವಿದ್ಯತೆಯ ದೇವಾಗಿದ್ದು, ಸರ್ವಜನಾಂಗದ ಶಾಂತಿಯ ತೋಟವಾಗಿದೆ. ಆದರೆ, ತಳಸಮುದಾಯಗಳು ಸಾವಿರಾರು ವರ್ಷಗಳಿಂದ ಸಂಕಷ್ಟಗಳನ್ನು ಎದುರಿಸುತ್ತ ಬಂದಿವೆ. ಕರ್ನಾಟಕ ರಾಜ್ಯವು ಅವಕಾಶ ವಂಚಿತ ಜಾತಿಗಳಿಗೆ ಮೀಸಲಾತಿ ನೀಡಿ, ಸಾಮಾಜಿಕ ಸಮಾನತೆ ಸಾರಿದೆ. ಹಲವು ಹಿಂದುಳಿದ ವರ್ಗಗಳ ಆಯೋಗವು ವೈಜ್ಞಾನಿಕ ಅಧ್ಯಯ ನಡೆಸಿ ಮೀಸಲಾತಿ ಜಾರಿಯಾಗಿದೆ. ಆದರೆ, ಬಲಾಡ್ಯರು ಶೋಷಿತರ ಪಾಲನ್ನು ಕಬಳಿಸುತ್ತಿರುವುದು ಶೋಚನೀಯವಾಗಿದೆ ಎಂದರು.

    ಎಚ್. ಕಾಂತರಾಜು ವರದಿಯನ್ನು ರಾಜ್ಯ ಸರಕಾರವು ಈ ಕೂಡಲೇ ಸ್ವೀಕರಿಸಿ, ವರದಿಯನ್ನು ಯಥಾವತ್ತಾಗಿ ಅಂಗೀಕರಿಸಿ ಜಾರಿಗೊಳಿಸಬೇಕು. ಕೇಮದ್ರ ಸರಕಾರವು ಜಾತಿವಾರು, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಕೈಗೊಳ್ಳಬೇಕು. ಮಹಿಳಾ ರಾಜಕೀಯ ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು. ರಾಜಕೀಯ ಕ್ಷೇತ್ರದಲ್ಲೂ ಒಳಮೀಸಲಾತಿ ಕಲಪಿಸಬೇಕು. ರಾಜಕೀಯ ಮೀಸಲಾತಿಯನ್ನು ಲೋಕಸಭೆ, ವಿಧಾನಸಭೆಗಳಲಲಿ ಹಿಂದುಳಿದ ಜಾತಿಗಳಿಗೆ, ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕಿದೆ ಎಂದು ಆಗ್ರಹಿಸಿದರು.

    ಸುದ್ದಿಗೋಷ್ಠಿಯಲ್ಲಿ ಚೆನ್ನಮ್ಮ, ಶಾಂತಾ ಬಳ್ಳಾರಿ, ರೇಖಾ ಕುರಿ, ಜಯಶ್ರೀ ಕುರಿ, ಗಂಗಾ ಚಕ್ಕರಣನವರ, ಭುವನೇಶ್ವರಿ, ಡಾ.ತನುಜಾ ಗೋವಿಂದಪ್ಪ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts