22.8 C
Bengaluru
Saturday, January 18, 2020

ನಿಲ್ಲದ ಮೀಸಲು ವಿವಾದ: ಎಸ್ಸಿ, ಎಸ್ಟಿ ನೌಕರರು vs ಸರ್ಕಾರ, ಒಂದೂವರೆ ವರ್ಷ ಸಕ್ರಮಕ್ಕೆ ಒತ್ತಡ

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಬೆಂಗಳೂರು: ಮೀಸಲು ಬಡ್ತಿ- ಹಿಂಬಡ್ತಿ- ಮುಂಬಡ್ತಿ ಪ್ರಕರಣ ಪೂರ್ಣ ಪ್ರಮಾಣದಲ್ಲಿ ಅಂತ್ಯ ಕಾಣುವ ಲಕ್ಷಣವೇ ಕಾಣಿಸುತ್ತಿಲ್ಲ. ಇದರಿಂದ ಆಡಳಿತ ವ್ಯವಸ್ಥೆಯಲ್ಲಿ ಗೊಂದಲ ಮುಂದುವರಿದಿದೆ.

ಮರು ಮುಂಬಡ್ತಿ ಪಡೆದ 76 ಪರಿಶಿಷ್ಟ ಜಾತಿ ಹಾಗೂ ಪಂಗಡದ ಇಂಜಿನಿಯರ್​ಗಳಿಗೆ ಸ್ಥಳ ನೀಡದೆ ಸತಾಯಿಸುತ್ತಿರುವುದು ಒಂದೆಡೆಯಾದರೆ, ಕಡ್ಡಾಯ ನಿರೀಕ್ಷಣಾ ಅವಧಿ ಘೋಷಣೆಗೆ ಸರ್ಕಾರ ಸ್ಪಷ್ಟ ತಡೆ ಹಾಕಿರುವುದು ಎಸ್ಸಿ, ಎಸ್ಟಿ ನೌಕರರ ಸಿಟ್ಟಿಗೆ ಕಾರಣವಾಗಿದೆ.

ಬಿ.ಕೆ. ಪವಿತ್ರ ಪ್ರಕರಣದಲ್ಲಿ ಸವೋಚ್ಚ ನ್ಯಾಯಾಲಯ ನೀಡಿದ ತೀರ್ಪಿನನ್ವಯ ಹಿಂಬಡ್ತಿಗೊಂಡು, ನಂತರ ಹಿಂಬಡ್ತಿ ರದ್ದಾಗಿ ಕರ್ತವ್ಯಕ್ಕೆ ವರದಿ ಮಾಡಿಕೊಂಡ ದಿನಾಂಕದವರೆಗಿನ ಅವಧಿಯಲ್ಲಿ ಕರ್ತವ್ಯಕ್ಕೆ ಹಾಜರಾಗದಿದ್ದರೂ ಕಡ್ಡಾಯ ನಿರೀಕ್ಷಣಾ ಅವಧಿ ಎಂದು ಘೋಷಿಸಬೇಕು ಎಂಬುದು ಎಸ್ಸಿ, ಎಸ್ಟಿ ನೌಕರರ ಒತ್ತಾಯ. ಆದರೆ, ಗೈರಾದ ದಿನಗಳನ್ನು ಕಡ್ಡಾಯ ನಿರೀಕ್ಷಣಾ ಅವಧಿ ಎಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂಬುದು ಸರ್ಕಾರದ ಸ್ಪಷ್ಟನೆ. ಇದು ಎಸ್ಸಿ, ಎಸ್ಟಿ ನೌಕರರು ಹಾಗೂ ಸರ್ಕಾರದ ನಡುವೆ ಲಡಾಯಿಗೆ ಕಾರಣವಾಗಿದೆಯಲ್ಲದೆ ರಾಜಕೀಯ ಪ್ರವೇಶವಾಗಿದ್ದು, ಸಿಎಂ, ಡಿಸಿಎಂಗೆ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದು ನೌಕರರ ಬೇಡಿಕೆ ಒಪ್ಪುವಂತೆ ಒತ್ತಡ ಹಾಕಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಸರ್ಕಾರ 3700ಕ್ಕೂ ಹೆಚ್ಚು ನೌಕರರನ್ನು ಹಿಂಬಡ್ತಿಗೊಳಿಸಿತ್ತು. ಜತೆಗೆ 65 ಸಾವಿರ ನೌಕರರ ಜ್ಯೇಷ್ಠತೆಯಲ್ಲಿ ವ್ಯತ್ಯಾಸವಾಗಿತ್ತು. ಬಳಿಕ ಸಿದ್ದರಾಮಯ್ಯ ಸರ್ಕಾರದ ಅಂತ್ಯದಲ್ಲಿ ಮೀಸಲು ಬಡ್ತಿ ತತ್ಪರಿಣಾಮ ಬಡ್ತಿ ರಕ್ಷಣೆಗೆ ಕಾನೂನು ತರಲಾಯಿತು. ಅದೂ ಕೋರ್ಟ್​ನಲ್ಲಿ ಪರಾಮರ್ಶೆಗೊಂಡು ಕಾನೂನನ್ನೇ ನ್ಯಾಯಾಲಯ ಎತ್ತಿ ಹಿಡಿಯಿತು. ಈ ತೀರ್ಪಿನಿಂದ ಹಿಂಬಡ್ತಿ ರದ್ದಾಗಿ, ಮುಂಬಡ್ತಿ ಗೊಂಡಲು 65 ಸಾವಿರ ನೌಕರರ ಜ್ಯೇಷ್ಠತೆ ಮುಂಚಿನಂತೆಯೇ ಆಯಿತು. ಆದರೆ, 2017ರಲ್ಲಿ ಸುಪ್ರೀಂ ಕೋರ್ಟ್ ಹಿಂಬಡ್ತಿಗೊಳಿಸಿದ ಬಳಿಕ ದೊಡ್ಡ ಪ್ರಮಾಣದಲ್ಲಿ ಎಸ್ಸಿ, ಎಸ್ಟಿ ನೌಕರರು ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಪ್ರಕರಣ ಕೋರ್ಟ್​ನಲ್ಲಿ ಇತ್ಯರ್ಥವಾಗಲಿ ಮತ್ತು ಹೊಸ ಕಾನೂನಿನ ಅನುಷ್ಠಾನದ ತೀರ್ವನವಾಗಲಿ ಎಂದು ಒಂದೂವರೆ ವರ್ಷ ಕರ್ತವ್ಯದಿಂದ ದೂರ ಉಳಿದಿದ್ದರು. ಇದೀಗ ಈ ಒಂದೂವರೆ ವರ್ಷ ಕರ್ತವ್ಯಕ್ಕೆ ಗೈರಾದ ಅವಧಿಯ ತೀರ್ಮಾನ ಮಾಡಬೇಕಾದ ಜಿಜ್ಞಾಸೆಗೆ ಸರ್ಕಾರ ಸಿಲುಕಿದೆ. ಎಲ್ಲ ಇಲಾಖೆಗಳಲ್ಲೂ ಈ ರೀತಿಯ ನೌಕರರಿದ್ದಾರೆ. ನಿರ್ದಿಷ್ಟ ಸಂಖ್ಯೆ ಸಿಕ್ಕಿಲ್ಲ. ಸರ್ಕಾರದ ಮೂಲಗಳ ಪ್ರಕಾರ ಒಂದು ಸಾವಿರಕ್ಕಿಂತ ಹೆಚ್ಚಿದ್ದಾರೆ.

ಡಿಪಿಎಆರ್ ನ.28ರಂದು ಹೊರಡಿಸಿದ ಸುತ್ತೋಲೆ ಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ಅಧಿಕಾರಿ ಗಳಿಗೆ ವ್ಯತಿರಿಕ್ತ ಅಂಶ ನಮೂದಿಸಲಾಗಿದೆ. ಇದು ನ್ಯಾಯಸಮ್ಮತವಲ್ಲ.

| ಪ್ರಿಯಾಂಕ್ ಖರ್ಗೆ ಮಾಜಿ ಸಚಿವ

ಸರ್ಕಾರ ಎಸ್ಸಿ, ಎಸ್ಟಿ ನೌಕರರಿಗೆ ಅನ್ಯಾಯ ಮಾಡಬಾರದು. ಅನೇಕ ಬಾರಿ ಮನವಿ ಕೊಟ್ಟಿದ್ದೇವೆ. ಕೂಡಲೇ ಸಮಸ್ಯೆ ಪರಿಹರಿಸಬೇಕು.

| ಚಂದ್ರಶೇಖರಯ್ಯ ಎಸ್ಸಿ, ಎಸ್ಟಿ ನೌಕರರ ಸಂಘದ ಕಾನೂನು ಸಲಹೆಗಾರ

ಸರ್ಕಾರದ ವಾದವೇನು?

ಮುಂಬಡ್ತಿ/ಹಿಂಬಡ್ತಿಗೊಳಪಟ್ಟ ಅಧಿಕಾರಿ/ನೌಕರರ ವಿಚಾರದಲ್ಲಿ ಕಾಲಕಾಲಕ್ಕೆ ಪರಿಗಣಿಸಿರುವ ಸುತ್ತೋಲೆ (2018 ಜೂನ್ 8, 2018 ಆಗಸ್ಟ್ 6 ಮತ್ತು 2018ರ ಆ.18ರಂದು) ಹೊರಡಿಸಲಾಗಿದೆ. ಸವೋಚ್ಚ ನ್ಯಾಯಾಲಯವು ಈ ವಿಷಯಕ್ಕೆ ಸಂಬಂಧಿಸಿದಂತೆ ಕಾಲಕಾಲಕ್ಕೆ ನೀಡುವ ತೀರ್ಪ, ನಿರ್ದೇಶನವನ್ನು ಸರ್ಕಾರ ಪಾಲಿಸಬೇಕಾಗುತ್ತದೆ. ಅಲ್ಲದೆ, ಸರ್ಕಾರವು ಕಾಲಕಾಲಕ್ಕೆ ಹೊರಡಿಸುವ ಮತ್ತು ಸೂಚನೆಗಳನ್ನು ಗೌರವಿಸುವುದು/ಪಾಲಿಸುವುದು ಎಲ್ಲ ಸರ್ಕಾರಿ ನೌಕರರ ಆದ್ಯ ಕರ್ತವ್ಯ. ಇದರ ಉಲ್ಲಂಘನೆ ನಡತೆ ನಿಯಮಗಳಿಗೆ ವಿರುದ್ಧ. ಇಲ್ಲವಾದಲ್ಲಿ ಸರ್ಕಾರಿ ನೌಕರರು ಸ್ವ ಇಚ್ಛೆಯಂತೆ ನಡೆದುಕೊಳ್ಳಲು ಎಡೆಮಾಡಿಕೊಟ್ಟಂತಾಗಿ ಆಡಳಿತ ಯಂತ್ರ ಹತೋಟಿಯಲ್ಲಿಡಲು ವಿಫಲವಾಗುತ್ತದೆ.

ನೌಕರರ ಮೇಲೆ ತೂಗುಗತ್ತಿ

ರಾಜ್ಯ ಸರ್ಕಾರದ ಅಧಿಕಾರಿ/ನೌಕರರು ನೇಮಕ/ವರ್ಗಾವಣೆ ಮಾಡಲಾದ ಹುದ್ದೆಗೆ ಸೇರುವ ಕಾಲವನ್ನು ಉಪಯೋಗಿಸಿಕೊಂಡು ನಂತರ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗ ಬೇಕು. ಒಂದು ವೇಳೆ ನೇಮಕ ಮಾಡಲಾದ ಹುದ್ದೆಗೆ ಸೇರುವ ಕಾಲ ಮುಗಿದರೂ ಕರ್ತವ್ಯಕ್ಕೆ ಹಾಜರಾಗದೆ ಇದ್ದಲ್ಲಿ ಅಂಥವರ ವಿರುದ್ಧ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿ ನಿಯಮ 83, 88ರ ಅನ್ವಯ ಕ್ರಮಕೈಗೊಳ್ಳಲೇ ಬೇಕಾಗುತ್ತದೆ. ರಿಯಾಯಿತಿ ಕೊಡಲು ಅಸಾಧ್ಯ ಎಂಬುದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸ್ಪಷ್ಟನೆ. ಈ ತೀರ್ಮಾನ ಅನುಷ್ಠಾನವಾದರೆ ಗೈರಾದ ಸಿಬ್ಬಂದಿ ವೇತನ ಬಡ್ತಿಗೆ ಕೊಕ್ಕೆ ಬೀಳಬಹುದು. ಭತ್ಯೆ ಕಡಿತ ಮಾಡಬಹುದು. ವಜಾ ಮಾಡಲೂ ಅವಕಾಶವಿರಲಿದೆ. ಮುಖ್ಯವಾಗಿ ಸೇವಾ ಪುಸ್ತಕದಲ್ಲಿ ಸ್ಪಷ್ಟವಾಗಿ ದಾಖಲಾಗಲಿದೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...