ಬಾಡಿಗೆ ಪಾವತಿ ವಿಚಾರ: ಕೇಂದ್ರ ಸಚಿವ ಪೋಖ್ರಿಯಾಲ್​ ವಿರುದ್ಧದ ನ್ಯಾಯಾಂಗ ನಿಂದನೆಗೆ ಸುಪ್ರೀಂ ತಡೆ

ನವದೆಹಲಿ: ಬಾಡಿಗೆ ಪಾವತಿ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ಮುಂದುವರಿಸದಂತೆ ಸುಪ್ರೀಂ ಕೋರ್ಟ್​ ಸೋಮವಾರ ತಡೆ ನೀಡಿದೆ. ಇದರೊಂದಿಗೆ ಬಾಡಿಗೆ ಪಾವತಿ ವಿಚಾರದಲ್ಲಿ ಪೋಖ್ರಿಯಾಲ್ ಅವರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ. ಮುಖ್ಯಮಂತ್ರಿಯಾಗಿದ್ದ ಅವಧಿಯ ನಂತರವೂ ಸರ್ಕಾರಿ ವಸತಿ ಬಳಸಿ ಅದಕ್ಕೆ ಬಾಡಿಗೆ ಪಾವತಿಸದೇ ಇದ್ದ ಪ್ರಕರಣದಲ್ಲಿ ಮಾರುಕಟ್ಟೆ ದರದಲ್ಲಿ ಬಾಡಿಗೆ ಮತ್ತು ಇತರೆ ಬಾಕಿ ಶುಲ್ಕವನ್ನು ಪಾವತಿಸುವಂತೆ ಉತ್ತರಾಖಂಡ ಹೈಕೋರ್ಟ್​ ಕಳೆದ ವರ್ಷ ಮೇ 3ರಂದು ತೀರ್ಪು ನೀಡಿತ್ತು. … Continue reading ಬಾಡಿಗೆ ಪಾವತಿ ವಿಚಾರ: ಕೇಂದ್ರ ಸಚಿವ ಪೋಖ್ರಿಯಾಲ್​ ವಿರುದ್ಧದ ನ್ಯಾಯಾಂಗ ನಿಂದನೆಗೆ ಸುಪ್ರೀಂ ತಡೆ