ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿಗಳ ಹಾವಳಿ: ಜನತೆ ಎಚ್ಚರದಿಂದಿರಲು ಸೂಚನೆ

Lakshmi Hebbalkar
Published on

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ಫಾರ್ಮ್ ಗಳನ್ನು ಬಿಡುಗಡೆ ಮಾಡಿಲ್ಲ. ನಕಲಿ ಅರ್ಜಿಗಳ ಮೂಲಕ ಕೆಲ ಕಿಡಿಗೇಡಿಗಳು ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಕಲಿ ಅರ್ಜಿ ಹಾವಳಿ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ, ಪ್ರಜಾಪ್ರತಿನಿಧಿಗಳ ಬಳಿ ಮಾತ್ರ ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net