ಎಸ್‌ಸಿಡಿಸಿಸಿ ಬ್ಯಾಂಕಿಗೆ ಅಟಲ್ ಪಿಂಚಣಿ ಯೋಜನೆಯಲ್ಲಿ ಸತತ ಮೂರನೇ ಬಾರಿಗೆ ರಾಷ್ಟ್ರೀಯ ಪ್ರಶಸ್ತಿ

sccccccccccccc
Published on



ಮಂಗಳೂರು : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಅಟಲ್ ಪಿಂಚಣಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ತರುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(ಎಸ್‌ಸಿಡಿಸಿಸಿ ಬ್ಯಾಂಕ್ ) ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ
ಮುಂಚೂಣಿಯಲ್ಲಿದೆ. ಈಗ ಭಾರತ ಸರ್ಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ನವದೆಹಲಿ ಇವರು ನೀಡಿದ ಅಟಲ್ ಪಿಂಚಣಿ ಯೋಜನೆಯ ಅನುಷ್ಠಾನಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ಸತತ ಮೂರನೇ ಬಾರಿ ಪ್ರಶಸ್ತಿ ಲಭಿಸಿದೆ .
ನವದೆಹಲಿಯಲ್ಲಿ ಆಯೋಜಿಸಲಾದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ದೀಪಕ್ ಮೊಹಂತಿ ಅವರಿಂದ ಎಸ್‌ಸಿಡಿಸಿಸಿ ಬ್ಯಾಂಕಿನ ಸಹಾಯಕ ಮಹಾ ಪ್ರಬಂಧಕರಾದ ರಾಜೇಶ್ ಶೆಟ್ಟಿ ಮತ್ತು ವಿಶ್ವನಾಥ ಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು.
ಕೇಂದ್ರ ಸರ್ಕಾರದ ಹಣಕಾಸು ಸೇವೆಗಳ ಕಾರ್ಯದರ್ಶಿ ಡಾ. ವಿವೇಕ್ ಜೋಷಿ, ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಎಕ್ಸಿಕ್ಯೂಟಿವ್ ಡೈರೆಕ್ಟರ್ ಎ. ಜಿ. ದಾಸ್, ಸದಸ್ಯೆ ಮಮತಾ ಶಂಕರ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net