

ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ
ಎಸ್‌ಸಿಡಿಸಿಸಿ ಬ್ಯಾಂಕ್ ಸಹಕಾರಿ ಸಂಘಗಳಿಗೆ ಬೆನ್ನೆಲುಬಾಗಿ ನಿಂತಿದೆ. ರೈತರ ಪರವಾಗಿ ನಿಂತಿರುವ ಬ್ಯಾಂಕ್ ಹಲವು ಯೋಜನೆಗಳನ್ನು ರೂಪಿಸಿದೆ. ಹಲವು ಸಂಘ- ಸಂಸ್ಥೆಗಳನ್ನು ಸೇರಿಸಿಕೊಂಡು ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸಿ ಮಹಿಳೆಯರ ಸಬಲೀಕರಣಕ್ಕೂ ಪ್ರೋತ್ಸಾಹ ನೀಡುತ್ತಾ ಸಮಾಜಕ್ಕೆ ಕೊಡುಗೆ ನೀಡುತ್ತಿದೆ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸುಳ್ಯ ತಾಲೂಕಿನ ಗುತ್ತಿಗಾರು ಶಾಖೆಯು ಗುತ್ತಿಗಾರು ಮುಖ್ಯ ರಸ್ತೆಯ ರಾಘವೇಂದ್ರ ಕಾಂಪ್ಲೆಕ್ಸ್‌ನ ಪ್ರಥಮ ಅಂತಸ್ತಿಗೆ ಸ್ಥಳಾಂತರಗೊಂಡಿದ್ದು, ಸ್ಥಳಾಂತರಿತ ಶಾಖೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಶಾಖೆ ಉದ್ಘಾಟಿಸಿದರು. ನಿರ್ದೇಶಕ ಕುಶಾಲಪ್ಪ ಗೌಡ ಎಟಿಎಂ ಕೇಂದ್ರ ಉದ್ಘಾಟಿಸಿದರು. ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಭದ್ರತಾ ಕೋಶ ಉದ್ಘಾಟಿಸಿದರು. ಗುತ್ತಿಗಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಿತ್ರಾ ಮೂಕಮಲೆ ಠೇವಣಿಪತ್ರ ವಿತರಿಸಿದರು. ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಲಾಕರ್ ಗ್ರಾಹಕರಿಗೆ ಲಾಕರ್ ಕೀ ವಿತರಿಸಿದರು. ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎನ್.ಮನ್ಮಥ ಹೊಸ ಸ್ವಸಹಾಯ ಸಂಘಗಳನ್ನು ಉದ್ಘಾಟಿಸಿದರು. ಗಣ್ಯರು ವಾಹನ ಸಾಲಪತ್ರ ವಿತರಿಸಿದರು. ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್, ಪ್ರಮುಖರಾದ ಭರತ್ ಮುಂಡೋಡಿ, ಪಿ.ಸಿ.ಜಯರಾಮ, ಕೇಶವ ಭಟ್ ಮುಳಿಯ, ವೆಂಕಟ್ ದಂಬೆಕೋಡಿ ಮತ್ತಿತರರು ಉಪಸ್ಥಿತರಿದ್ದರು. ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಸ್ವಾಗತಿಸಿದರು. ಶಾಖಾ ವ್ಯವಸ್ಥಾಪಕ ಸಂತೋಷ್ ಕುಮಾರ್ ಎಂ. ಕಾರ್ಯಕ್ರಮ ನಿರೂಪಿಸಿದರು.
ಸಾಧಕರಿಗೆ ಗೌರಪಾರ್ಪಣೆ
ಕಾರ್ಯಕ್ರಮದಲ್ಲಿ ಕಟ್ಟಡ ಮಾಲೀಕ ಅನಿಲ್ ಕುಮಾರ್, ಶಾಖಾ ವ್ಯವಸ್ಥಾಪಕ ಕುಶಾಲಪ್ಪ ಗೌಡ ಯು., ಶಾಖೆಯ ಉದ್ಘಾಟನಾ ಮೇಲ್ವಿಚಾರಣಾ ಜವಾಬ್ದಾರಿ ವಹಿಸಿದ್ದ ಪುತ್ತೂರು ಶಾಖಾ ವ್ಯವಸ್ಥಾಪಕ ಹರೀಶ್ ಪಿ., ಬ್ಯಾಂಕ್ ಸ್ವಸಹಾಯ ಸಂಘಗಳ ಮೇಲ್ವಿಚಾರಕ ರಂಜಿತ್ ಕುಮಾರ್ ಎ., ಬ್ಯಾಂಕ್ ವಲಯ ಮೇಲ್ವಿಚಾರಕ ಮನೋಜ್ ಎಂ.ಸಿ., ಸುಬ್ರಹ್ಮಣ್ಯ ಭಟ್, ಆದರ್ಶ ಬಿ. ಅವರನ್ನು ಸನ್ಮಾನಿಸಲಾಯಿತು. ಪ್ರದೀಪ್ ಕುಮಾರ್, ರತನ್ ಕೆ.ಎಸ್., ವಿನಯಕುಮಾರ್ ಪಿ., ನವೋದಯ ವಲಯದ ಶ್ರೀಧರ್ ಎಂ., ದಾಮೋದರ್, ಹೇಮಂತ್, ಗಂಗಾಧರ್, ಪ್ರಕಾಶ್, ಸವಿತಾ ಎಸ್.ಟಿ., ಚಂದ್ರಕಲಾ, ಅನಿತಾ, ದೇವಕಿ ಅವರನ್ನು ಗೌರವಿಸಲಾಯಿತು.