More

    ಎಸ್‌ಸಿಡಿಸಿಸಿ ಬ್ಯಾಂಕ್‌ಗೆ ದಾಖಲೆಯ 61.38 ಕೋಟಿ ರೂ.ಲಾಭಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ಮಾಹಿತಿ

    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ 2023ರ ಮಾರ್ಚ್ 31ಕ್ಕೆ ಅಂತ್ಯವಾದ ಅಂತ್ಯವಾದ ಆರ್ಥಿಕ ವರ್ಷದಲ್ಲಿ 61.38 ಕೋಟಿ ರೂ.ಲಾಭ ಗಳಿಸಿದೆ. ಇದು ಬ್ಯಾಂಕ್‌ನ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯಾಗಿದೆ ಎಂದು
    ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್ ತಿಳಿಸಿದ್ದಾರೆ.
    ಸೋಮವಾರ ಬ್ಯಾಂಕಿನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ ಕಳೆದ ವರ್ಷದ ಲಾಭ (50.49 ಕೋಟಿ ರೂ.) ಕ್ಕಿಂತ ಶೇಕಡಾ 21.57 ಏರಿಕೆಯಾಗಿದೆ. ವಿನೂತನ ಬ್ಯಾಂಕಿಂಗ್ ಸೇವೆಯನ್ನು ತನ್ನ 111 ಶಾಖೆಗಳ ಮೂಲಕ ನೀಡುತ್ತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಜನಸಾಮಾನ್ಯರ ಬ್ಯಾಂಕ್ ಆಗಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಚಾರ ಎಂದರು.
    ವರದಿ ವರ್ಷದಲ್ಲಿ 13,512 ಕೋಟಿ ರೂ. ಒಟ್ಟು ವ್ಯವಹಾರ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಕಳೆದ ಸಾಲಿನ ಒಟ್ಟು ವ್ಯವಹಾರಕ್ಕಿಂತ ಈ ಬಾರಿ ಶೇ 16.40 ಏರಿಕೆ ಕಂಡಿದೆ. 2023-24ನೇ ಸಾಲಿಗೆ 15,000 ಕೋಟಿ ರೂ.ವ್ಯವಹಾರದ ಗುರಿ ಹಾಗೂ 75 ಕೋಟಿ ರೂ.ಲಾಭ ಗಳಿಕೆ ಗುರಿಯನ್ನು ಬ್ಯಾಂಕ್ ಹೊಂದಿದೆ ಎಂದರು.
    *6,368 ಕೋಟಿ ರೂ.ಠೇವಣಿ
    ಸರ್ಕಾರದ ಯಾವುದೇ ಠೇವಣಾತಿ ಇಲ್ಲದೆಯೂ ಬ್ಯಾಂಕ್ ತನ್ನ 111 ಶಾಖೆಗಳ ಮುಖಾಂತರ ಒಟ್ಟು 6,368.50 ಕೋಟಿ ರೂ.ಠೇವಣಿ ಸಂಗ್ರಹಿಸಿದೆ .ತನ್ಮೂಲಕ ಎಸ್‌ಸಿಡಿಸಿಸಿ ಬ್ಯಾಂಕ್ ಠೇವಣಿ ಸಂಗ್ರಹಣೆಯಲ್ಲಿ ರಾಜ್ಯದ ಇತರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗಳಲ್ಲಿ ಮುಂಚೂಣಿಯಲ್ಲಿದೆ. ಕಳೆದ ಸಾಲಿನ ಠೇವಣಿ ಸಂಗ್ರಹಣೆಗಿಂತ ಈ ಬಾರಿ ಶೇ.12.69 ಏರಿಕೆಯಾಗಿದೆ.
    *ರಾಷ್ಟ್ರೀಯ ದಾಖಲೆ
    ಬ್ಯಾಂಕ್ ವರದಿ ವರ್ಷದಕಲ್ಲಿ 5,695.55. ಕೋಟಿ ರೂ. ಮುಂಗಡ ನೀಡಿದೆ. ಕೃಷಿ ಅಭಿವೃದ್ಧಿಗೆ ಅಲ್ಪಾವಧಿ ಸಾಲವಾಗಿ 1,681.46 ಕೋಟಿ ರೂ. ಮಧ್ಯಮಾವಧಿ ಸಾಲ 150.20 ಕೋಟಿ ರೂ. ಒಟ್ಟು ಕೃಷಿ ಕ್ಷೇತ್ರಕ್ಕೆ 1,831.66 ಕೋಟಿ ರೂ. ಸಾಲ ನೀಡಲಾಗಿದೆ. ಬ್ಯಾಂಕ್ ವರದಿ ವರ್ಷದಲ್ಲಿ ನೀಡಿದ ಎಲ್ಲ ಕೃಷಿ ಸಾಲಗಳು ಶೇ.100 ಮರುಪಾವತಿ ಕಂಡು ದಾಖಲೆ ನಿರ್ಮಿಸಿದೆ.ಇಂತಹ ಸಾಧನೆಯನ್ನು ಕಳೆದ 28 ವರ್ಷಗಳಿಂದ ಸತತವಾಗಿ ಮಾಡಿರುವುದು ರಾಷ್ಟ್ರೀಯ ದಾಖಲೆಯಾಗಿದೆ.
    * ರುಪೇ ಕಿಸಾನ್ ಕ್ರೆಡಿಟ್ ಕಾರ್ಡ್
    ದ.ಕ.ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಮಂಗಳ ಕಿಸಾನ್ ಕ್ರೆಡಿಟ್ ಕಾರ್ಡ್ ಖಾತೆಯನ್ನು ಹೊಂದಿರುವ ರೈತರಿಗೆ ಬ್ಯಾಂಕ್ ರುಪೇ ಕಿಸಾನ್ ಕಾರ್ಡ್‌ನ್ನು ನೀಡಿದೆ.1,32,291 ರುಪೇ ಕಿಸಾನ್ ಕಾರ್ಡ್‌ಗಳನ್ನು ಹಾಗೂ 72,298 ರುಪೇ ಡೆಬಿಟ್ ಕಾರ್ಡ್‌ಗಳನ್ನು ಬ್ಯಾಂಕ್‌ನ ಇತರ ಗ್ರಾಹಕರಿಗೆ ನೀಡಲಾಗಿದೆ ಎಂದು ಅವರು ತಿಳಿಸಿದರು.
    ಬ್ಯಾಂಕಿನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಎಂ.ವಾದಿರಾಜ ಶೆಟ್ಟಿ , ರಾಜು ಪೂಜಾರಿ,ದೇವಿಪ್ರಸಾದ್ ಶೆಟ್ಟಿ ಬೆಳಪು , ಶಶಿಕುಮಾರ್ ರೈ ಬಾಲ್ಯೊಟ್ಟು , ಅಶೋಕ್‌ಕುಮಾರ್ ಶೆಟ್ಟಿ , ಮೋನಪ್ಪ ಶೆಟ್ಟಿ , ಜೈರಾಜ್ ಬಿ ರೈ , ರಾಜೇಶ್ ರಾವ್ , ಸದಾಶಿವ ಉಳ್ಳಾಲ್, ಸಹಕಾರ ಸಂಘಗಳ ಉಪ ನಿಬಂಧಕ ರಮೇಶ್.ಎಚ್.ಎನ್., ಮುಖ್ಯಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts