More

    ಪರಿಶಿಷ್ಟ ಜಾತಿ ಪಟ್ಟಿಯಲ್ಲೇ ಮುಂದುವರಿಸಲು ರಾಜ್ಯ ಭೋವಿ (ವಡ್ಡರ) ಸಂಘ ಮನವಿ

    ರಾಯಚೂರು: ಲಂಬಾಣಿ, ಭೋವಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೆಲವರು ಒತ್ತಾಯಿಸುತ್ತಿದ್ದು, ಈ ಜಾತಿಗಳನ್ನು ಪರಿಶಿಷ್ಟ ಜಾತಿಯಲ್ಲೇ ಮುಂದುವರಿಸಬೇಕು ಎಂದು ರಾಜ್ಯ ಭೋವಿ (ವಡ್ಡರ) ಸಂಘ ಒತ್ತಾಯಿಸಿದೆ.

    ಈ ಕುರಿತು ಸಂಘದ ನಿಯೋಗ ಜಿಲ್ಲಾಧಿಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಮಹ್ಮದ್ ಆಸೀಫ್‌ಗೆ ಸೋಮವಾರ ಮನವಿ ಸಲ್ಲಿಸಿತು. ಭೋವಿ ಜಾತಿ ಸೇರಿ ಐದು ಜಾತಿಗಳನ್ನು ಎಸ್ಸಿ ಪಟ್ಟಿಯಿಂದ ತೆಗೆಯುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ಸುಳ್ಳು ಅಪಪ್ರಚಾರ ನಡೆಸಲಾಗುತ್ತಿದೆ ಎಂದು ದೂರಿದರು.

    ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗಕ್ಕೆ ಅಹವಾಲು ಸಲ್ಲಿಸಲು ಸೂಚಿಸಿದ ಹಿನ್ನೆಲೆಯಲ್ಲಿ ಆಯೋಗ ಕರ್ನಾಟಕ ಸರ್ಕಾರಕ್ಕೆ ವರದಿ ಕೇಳಿದೆ.

    ಲಂಬಾಣಿ, ಭೋವಿ, ಕೊರಮ, ಕೊರಚ ಸಮುದಾಯ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಹಿಂದುಳಿದಿವೆ. ಎಲ್ಲ ರೀತಿಯ ಅವಮಾನ, ಅಸಮಾನತೆ, ಸಾಮಾಜಿಕ ಕಳಂಕ ಅನುಭವಿಸುತ್ತಾ ಬಂದಿವೆ. ಪ್ರದೇಶವಾರು ಸಾಮಾಜಿಕ ಜೀವನಕ್ಕೆ ಅನುಗುಣವಾಗಿ ಈ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರಿಸಲಾಗಿದೆ.

    ಕಾರಣ ಸಂವಿಧಾನ ಬದ್ಧವಾಗಿ ಐದು ಜಾತಿಗಳಿಗೆ ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಸೇರಿಸಿ ಸೌಲಭ್ಯಗಳನ್ನು ನೀಡಿದ್ದು, ಅದನ್ನು ಯಥಾಸ್ಥಿತಿ ಮುಂದುವರಿಸುವ ಮೂಲಕ ಸಾಮಾಜಿಕ ನ್ಯಾಯ ಕಾಪಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ನಿಯೋಗದಲ್ಲಿ ಸಂಘದ ಅಧ್ಯಕ್ಷ ಲಕ್ಷ್ಮಣ, ಪದಾಧಿಕಾರಿಗಳಾದ ಗೋವಿಂದರಾಜ್ ನಾಯ್ಕ, ನಾರಾಯಣ ನಾಯ್ಕ, ಶಶಿಕಲಾ ಭೀಮರಾಯ, ನರಸಿಂಹಲು ಕಮಲಾಪುರ, ಮಾಲಾ ಭಜಂತ್ರಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts