ಪರಿಶಿಷ್ಟ ಉಪಜಾತಿ ಸಮೀಕ್ಷಾ ಕಾರ್ಯ ಸಮರ್ಪಕ ನಿರ್ವಹಣೆಗೆ ಸೂಚನೆ

blank

ಉಡುಪಿ: ಜಾತಿ ಮತ್ತು ಒಳಮೀಸಲಾತಿ ಕಲ್ಪಿಸಲು ಕೈಗೊಂಡಿರುವ ಉಪಜಾತಿ ಸಮೀಕ್ಷಾ ಕಾರ್ಯ ಗಣತಿದಾರರು ವೈಜ್ಞಾನಿಕ ಹಾಗೂ ಸಮರ್ಪಕವಾಗಿ ನಿರ್ವಹಿಸಬೇಕು. ಯಾರೂ ಕೂಡ ಸಮೀಕ್ಷೆಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.

blank

ಸೋಮವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಅಟಲ್​ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಪಂ ಸಹಯೋಗದಲ್ಲಿ ಪರಿಶಿಷ್ಟ ಜಾತಿ ಮತ್ತು ಉಪಜಾತಿ ಸಮಗ್ರ ಸಮೀಕ್ಷೆಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಮಾಸ್ಟರ್​ ಟೆನರ್​ಗಳಿಗೆ ಆಯೋಜಿಸಲಾದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.

ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತು ನ್ಯಾ. ಎಚ್​.ಎನ್​, ನಾಗಮೋಹನದಾಸ್​ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಮೀಕ್ಷೆ ನಡೆಸುವ ಸಂಬಂಧ ಮೊಬೈಲ್​ ಆಪ್​ ಮೂಲಕ ಜಿಲ್ಲೆಯಲ್ಲಿ ಮೂರು ಹಂತಗಳಲ್ಲಿ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ತರಬೇತಿ ಪಡೆದ ಗಣತಿದಾರರು ನಿಗದಿತ ಅವಧಿಯಲ್ಲಿ ನಿಖರ ಮಾಹಿತಿಯನ್ನು ಕಲೆ ಹಾಕಬೇಕು ಎಂದರು.

ಜಿಲ್ಲೆಯಲ್ಲಿ ಮೇ 5 ರಿಂದ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸುವ ಸಮೀಕ್ಷಾ ಕಾರ್ಯ ನಡೆಯಲಿದ್ದು, ಮೊದಲನೇ ಹಂತದಲ್ಲಿ ಮೇ 5 ರಿಂದ 17 ರ ವರೆಗೆ ಸಮೀಕ್ಷಾದಾರರು ಮನೆ ಮನೆ ಭೇಟಿ ನೀಡಲಿದ್ದಾರೆ. ಎರಡನೇ ಹಂತದಲ್ಲಿ ಮೇ 19 ರಿಂದ 21 ರ ವರೆಗೆ ವಿಶೇಷ ಶಿಬಿರಗಳನ್ನು ಕೈಗೊಳ್ಳುವ ಮೂಲಕ ಮನೆ ಮನೆ ಭೇಟಿಯ ಅವಧಿಯಲ್ಲಿ ಬಿಟ್ಟುಹೋದ ಪರಿಶಿಷ್ಟ ಜಾತಿ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸಲಾಗುವುದು. ಮೂರನೇ ಹಂತದಲ್ಲಿ ಆನ್​ಲೈನ್​ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಪರಿಶಿಷ್ಟ ಜಾತಿಯಲ್ಲಿ 101 ಉಪಜಾತಿಗಳಿವೆ. ಇವೆಲ್ಲವೂಗಳನ್ನು ಸಮೀಕ್ಷೆಯ ಅಡಿಯಲ್ಲಿ ತರಬೇಕು. ಪರಿಶಿಷ್ಟ ಜಾತಿ ಸಮುದಾಯಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಧ್ಯಯನವನ್ನೂ ಸಹ ಸಮೀಕ್ಷೆಯಲ್ಲಿ ಮಾಡಲಾಗುವುದು ಎಂದರು.

ಕಾರ್ಯಾಗಾರದಲ್ಲಿ ಸಹಾಯಕ ಕಮೀಷನರ್​ ರಶ್ಮಿ ಎಸ್​., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. ಡಯಟ್​ ಉಪಪ್ರಾಂಶುಪಾಲ ಡಾ. ಅಶೋಕ್​ ಕಾಮತ್​ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.

Share This Article

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…