More

    ರೈತ ವಿದ್ಯಾನಿಧಿ ಯೋಜನೆ ಪ್ರಾರಂಭಿಸಿ

    ಹಗರಿಬೊಮ್ಮನಹಳ್ಳಿ: ವಿದ್ಯಾರ್ಥಿ ವೇತನ ನಿಗದಿತ ಸಮಯದಲ್ಲಿ ಪಾವತಿಸಲು ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆ ಪದಾಧಿಕಾರಿಗಳು ಪಟ್ಟಣದ ತಾಲೂಕು ಆಡಳಿತ ಸೌಧದ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.

    ವಿದ್ಯಾರ್ಥಿ ವೇತನ ನಿಗದಿತ ಸಮಯದಲ್ಲಿ ಪಾವತಿಸಿ

    ವಿದ್ಯಾರ್ಥಿಗಳ ಆರ್ಥಿಕ ಸಮಸ್ಯೆಯನ್ನು ಅರಿಯುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಆರ್ಥಿಕ ಪರಿಸ್ಥಿತಿ ಸರಿದೂಗಿಸಲು ವಿದ್ಯಾರ್ಥಿಗಳ ವೇತನವನ್ನು ಇನ್ನಿತರ ಕಾರ್ಯಗಳಿಗೆ ಬಳಸಿಕೊಳ್ಳಲಾಗಿದೆ. ರಾಜ್ಯದಲ್ಲಿ 4 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನ ವಿದ್ಯಾರ್ಥಿ ವೇತನ ತಡೆ ಹಿಡಿದಿದೆ ಎಂದು ಸಂಘಟನೆಯ ಜಿಲ್ಲಾ ಸಂಚಾಲಕ ಟಿ.ಭರತ್ ಆಕ್ರೋಶ ವ್ಯಕ್ತಪಡಿಸಿದರು.

    ಇದನ್ನೂ ಓದಿ: ರೋಹಿತ್ ಶರ್ಮ​ ಪಡೆ ವಿಶ್ವಕಪ್​ ಟ್ರೋಫಿ ಗೆಲ್ಲುತ್ತಾ? ಎಂ.ಎಸ್​. ಧೋನಿ ಪ್ರತಿಕ್ರಿಯೆ ವೈರಲ್​

    ಎಸ್‌ಎಸ್‌ಪಿ ತಂತ್ರಾಂಶದಲ್ಲಿ ವಿದ್ಯಾರ್ಥಿ ವೇತನ ಮಂಜೂರಾಗಿರುವುದಾಗಿ ತೋರಿಸುತ್ತಿದೆ. ಆದರೆ ವಿದ್ಯಾರ್ಥಿಗಳ ಖಾತೆಗೆ ಹಣ ಜಮೆಯಾಗಿಲ್ಲ. ವೇತನ ಪಾವತಿಗೆ ಮುನ್ನವೇ ಮುಂದಿನ ಶೈಕ್ಷಣಿಕ ವರ್ಷದ ಅರ್ಜಿ ಆಹ್ವಾನಿಸಿರುವುದು ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ರೈತ ವಿದ್ಯಾನಿಧಿ ಘೋಷಿಸುವ ಮೂಲಕ ರೈತರ ಮಕ್ಕಳಿಗೆ ಪ್ರೋತ್ಸಾಹ ನೀಡಲಾಗಿತ್ತು. ಆದರೆ ಪ್ರಸ್ತುತ ಸರ್ಕಾರ ರೈತ ವಿದ್ಯಾನಿಧಿ ತಡೆ ಹಿಡಿದು, ರೈತಾಪಿ ವರ್ಗಕ್ಕೆ ಅನ್ಯಾಯ ಎಸಗಿದ್ದಾರೆ. ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುವ ಮುನ್ನವೇ ಸರ್ಕಾರ ಶೀಘ್ರವೇ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts