

ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್, ಬೆಂಗಳೂರು ಇಂದಿರಾನಗರ ರೋಟರಿ ಕ್ಲಬ್ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ತಾಲೂಕಿನ 258 ವಿದ್ಯಾರ್ಥಿಗಳಿಗೆ 10,32,000 ರೂ.ಮೊತ್ತದ ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಬೆಳ್ತ ಂಗಡಿಯ ರೋಟರಿ ಸಭಾಭವನದಲ್ಲಿ ಶನಿವಾರ ನಡೆಯಿತು.
ತಾಲೂಕಿನ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಕಲಿಯುತ್ತಿರುವ ಶೇ.85ಕ್ಕಿಂತ ಅಧಿಕ ಅಂಕ ಗಳಿಸಿರುವ, ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ವಿದ್ಯಾರ್ಥಿ&ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆದುಕೊಂಡರು.
ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ ಅಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಇಂದಿರಾನಗರ ಅಧ್ಯೆ ಸುಪ್ರಿಯಾ ಖಾಂದಾರಿ, ಕಾರ್ಯದರ್ಶಿ ನರಸಿಂಹನ್ ಕಣ್ಣನ್, ರೋಟರಿ ಜಿಲ್ಲಾ ಕಾರ್ಯದರ್ಶಿ ರಿತೇಶ್ ಬಾಳಿಗ, ಸಹಾಯಕ ಗವರ್ನರ್ ಮಹಮ್ಮದ್ ವಳವೂರು, ಮಾಜಿ ಕಾರ್ಯದರ್ಶಿ ಸುರೇಶ್, ಇಂದಿರಾ ನಗರ ರೋಟರಿ ಕ್ಲಬ್ ವಿದ್ಯಾರ್ಥಿ ವೇತನ ಸಂಚಾಲಕ ರಾಜ ಕೌರ, ಜಗದೀಶ್ ಮುಗುಳಿ, ಶ್ರೀಧರ ಪಡುವೆಟನ್ನಾಯ, ರೋಟರಿ ವಲಯ ಸೇನಾನಿ ಮನೋರಮ ಭಟ್, ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ಕುಮಾರ್ ರಾವ್, ಬೆಂಗಳೂರು ಇಂದಿರಾ ನಗರ ರೋಟರಿ ಕ್ಲಬ್ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ಪದಾಧಿಕಾರಿಗಳು, ಸದಸ್ಯರು, ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು.
ಬೆಳ್ತಂಗಡಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ವಕೀಲ ಬಿ.ಕೆ.ಧನಂಜಯ ರಾವ್ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.