More

    ಎರಡನೇ ಹಂತದಲ್ಲಿ ೨೨೦೩ ವಿದ್ಯಾರ್ಥಿಗಳು ಭಾಗಿ

    ಭಾಲ್ಕಿ: ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಪದವಿಪೂರ್ವ ವಿಜ್ಞಾನ ವಸತಿ ಕಾಲೇಜಿನಲ್ಲಿ ಶನಿವಾರ ನಡೆದ ಎರಡನೇ ಹಂತದ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆಯನ್ನು ೨೨೦೩ ವಿದ್ಯಾರ್ಥಿಗಳು ಬರೆದರು.

    ರಾಜ್ಯ ಸೇರಿ ನೆರೆಯ ತೆಲಂಗಾಣ, ಮಹಾರಾಷ್ಟçದ ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ಕಲ್ಪಿಸುವ ಉದ್ದೇಶದಿಂದ ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು, ಶ್ರೀ ಗುರುಬಸವ ಪಟ್ಟದ್ದೇವರು ಮಾರ್ಗದರ್ಶನದಲ್ಲಿ ಆರು ವರ್ಷಗಳಿಂದ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್​ನಿಂದ ಗೋಲ್ಡನ್ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಏರ್ಪಡಿಸಿ ಆಯ್ಕೆಯಾದವರಿಗೆ ಉಚಿತವಾಗಿ ಪಿಯು ಶಿಕ್ಷಣ ನೀಡಲಾಗುತ್ತಿದೆ.

    ೨೦೨೪-೨೫ರ ಶೈಕ್ಷಣಿಕ ವರ್ಷಕ್ಕೂ ಈ ಯೋಜನೆ ಮುಂದುವರಿಸಿದ್ದು, ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆಗಾಗಿ ೮೭೨೪ ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ. ಮೂರು ಹಂತದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ೨೧ರಂದು ನಡೆದಿದ್ದ ಮೊದಲ ಹಂತದ ಪರೀಕ್ಷೆಯಲ್ಲಿ ೨೧೦೩ ವಿದ್ಯಾರ್ಥಿಗಳು ಹಾಜರಾಗಿದ್ದರು. ಶನಿವಾರದ ಪರೀಕ್ಷೆಯನ್ನು ೨೨೦೩ ಮಕ್ಕಳು ಪರೀಕ್ಷೆ ಬರೆದರು. ಭಾನುವಾರ ಮೂರನೇ ಮತ್ತು ಕೊನೆಯ ಹಂತದ ಪರೀಕ್ಷೆ ನಡೆಯಲಿದ್ದು, ೩೨೦೦ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ.

    ಪರೀಕ್ಷಾ ಕೊಠಡಿಗಳಿಗೆ ಹಿರೇಮಠ ಸಂಸ್ಥಾನದ ಕಾರ್ಯದರ್ಶಿ ಶ್ರೀ ಮಹಾಲಿಂಗ ಸ್ವಾಮೀಜಿ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ, ಧನರಾಜ ಬಂಬುಳಗೆ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts