More

    ಶಿಕ್ಷಕರ ಮಕ್ಕಳಿಗೆ ವಿದ್ಯಾರ್ಥಿವೇತನ: ಅರ್ಜಿ ಸಲ್ಲಿಸಲು ಜ.20 ಕೊನೇ ದಿನ

    ಬೆಂಗಳೂರು: ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಶಿಕ್ಷಕರ ಮಕ್ಕಳಿಗೆ “ಪ್ರತಿಭಾವಂತ ವಿದ್ಯಾರ್ಥಿ ವೇತನ” ಮಂಜೂರು ಮಾಡಲು ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಿದೆ.

    ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ವಿದ್ಯಾರ್ಥಿವೇತನ ನೀಡಲಾಗುತ್ತಿದೆ. ಎಸ್ಸೆಸ್ಸೆಲ್ಸಿಯಿಂದ ಸ್ನಾತಕೋತ್ತರ ಪದವಿವರೆಗೆ ಅತಿ ಹೆಚ್ಚು ಅಂಕ ಪಡೆದಿರುವ ಶಿಕ್ಷಕರ, ಉಪನ್ಯಾಸಕರ/ಪ್ರಾಂಶುಪಾಲರ, ನಿವೃತ್ತ ಶಿಕ್ಷಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತಿದೆ.

    2021-22ನೇ ಸಾಲಿನಲ್ಲಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಸಿಬಿಎಸ್​ಇ/ ಐಸಿಎಸ್​ಇ ವ್ಯಾಸಂಗ ಮಾಡುತ್ತಿರುವ ಮಕ್ಕಳು ಅರ್ಹರಾಗಿರುವುದಿಲ್ಲ. ಅರ್ಜಿಗಳನ್ನು ಶಿಕ್ಷಕರ ಕಲ್ಯಾಣ ನಿಧಿಯ ಜಾಲತಾಣ kstbfonline.karnataka.gov.in ಅಥವಾ
    www.schooleducation.kar.nic.in ನಲ್ಲಿ ಆನ್​ಲೈನ್​ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು 2023ರ ಜ.20 ಕೊನೇ ದಿನ.

    ಸತ್ತ ಮೇಲೆ ನಗ್ತಿರ್ಬೆಕ್ನನ್ಹೆಣ, ನಗ್ತಿರ್ಬೇಕು…

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಣಬೆ ಪದಾರ್ಥ ತಿಂದು ತಂದೆ-ಮಗ ಸಾವು!? ರಾತ್ರಿಯಿಡೀ ನರಳಾಡಿ ಮನೆಯ ಅಂಗಳದಲ್ಲೇ ದುರಂತ ಅಂತ್ಯ

    ಗೆಳೆಯನನ್ನು ಕೊಂದು ಕಾರಿನಲ್ಲಿ ಮೃತದೇಹದೊಂದಿಗೆ ಪೊಲೀಸ್ ಠಾಣೆಗೇ ಬಂದ ಭೂಪ! ಬೆಂಗಳೂರಲ್ಲಿ ಬೆಚ್ಚಿಬೀಳಿಸೋ ಘಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts