ಕೊಂಕಣಿ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್

scolership
ಕೊಂಕಣಿ ಭಾಷಾ ವಿದ್ಯಾರ್ಥಿಗಳಿಗೆ ವಿಶ್ವ ಕೊಂಕಣಿ ಕೇಂದ್ರ ವತಿಯಿಂದ ಸ್ಕೂಲ್ ಬ್ಯಾಗ್ ಮತ್ತು ವಿದ್ಯಾರ್ಥಿವೇತನ ವಿತರಿಸಲಾಯಿತು
Published on

ಗಂಗೊಳ್ಳಿ: ಇಲ್ಲಿನ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ತೃತೀಯ ಭಾಷೆಯಾಗಿ ಕೊಂಕಣಿಯನ್ನು ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರ ವತಿಯಿಂದ ಶುಕ್ರವಾರ ಸ್ಕೂಲ್ ಬ್ಯಾಗ್ ಮತ್ತು ವಿದ್ಯಾರ್ಥಿವೇತನ ವಿತರಿಸಲಾಯಿತು.

ಕೊಂಕಣಿ ಸಾಂಸ್ಕೃತಿಕ ಸಂಘದ ಮುಖ್ಯಸ್ಥ ಎಂ.ಆರ್.ಕಾಮತ್, ಉಷಾ ಪೈ ಹಾಗೂ ಪತ್ರಕರ್ತ ವೆಂಕಟೇಶ ಬಾಳಿಗ ಶುಭಹಾರೈಸಿದರು.
ಜಿಎಸ್‌ವಿಎಸ್ ಅಸೋಸಿಯೇನ್ ಕಾರ್ಯದರ್ಶಿ ಎಚ್.ಗಣೇಶ್ ಕಾಮತ್, ಸಂಚಾಲಕ ಎನ್.ಸದಾಶಿವ ನಾಯಕ್, ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಗೋಪಾಲ ದೇವಾಡಿಗ, ಆಂಗ್ಲ ಮಾಧ್ಯಮ ಶಾಲೆ ಮುಖ್ಯಶಿಕ್ಷಕ ರಾಘವೇಂದ್ರ ಶೇರುಗಾರ್ ಉಪಸ್ಥಿತರಿದ್ದರು. ರೇಷ್ಮಾ ನಾಯಕ್ ಮತ್ತು ನಮಿತಾ ಶೆಣೈ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net