ಅಂಕ ಗಳಿಕೆ ಜತೆ ಮೌಲ್ಯ ರೂಢಿಸಿಕೊಳ್ಳುವುದು ಮುಖ್ಯ

vikas
ವಿಕಾಸ್ ಭಾರತ್ ಟ್ರಸ್ಟ್ ವತಿಯಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಣದಲ್ಲಿ ವಿಶೇಷ ಸಾಧನೆ ಮಾಡಿದ ಪ್ರತಿಭಾವಂತರಿಗೆ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ನಡೆಯಿತು.
Published on

ಕಾರ್ಕಳ: ಸಮಾಜದಿಂದ ಪಡೆಯುವುದು ಮಾತ್ರವಲ್ಲ ಕೊಡುವ ಮನಸ್ಸು ನಮ್ಮದಾಗಬೇಕು. ಬರೀ ಅಂಕಗಳಿಕೆಯೇ ಜೀವನವಲ್ಲ. ಅಂಕ ಗಳಿಕೆ ಜತೆ ಜೀವನಕ್ಕೆ ಬೇಕಾದ ಮೌಲ್ಯ ರೂಢಿಸಿಕೊಳ್ಳುವುದು ಮುಖ್ಯ ಎಂದು ಮಾರ್ಷಲ್ ಆರ್ಟ್ಸ್ ತರಬೇತುದಾರ ಸಂವೇದನಾ ಫೌಂಡೇಶನ್ ಸಂಸ್ಥಾಪಕ ಪ್ರಕಾಶ್ ಮಲ್ಪೆ ಹೇಳಿದರು.

ವಿಕಾಸ್ ಭಾರತ್ ಟ್ರಸ್ಟ್ ವತಿಯಿಂದ ಬೆಳ್ಮಣ್ ವಿಠೋಭಾ ಭಜನಾ ಮಂದಿರದಲ್ಲಿ ಭಾನುವಾರ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಣದಲ್ಲಿ ವಿಶೇಷ ಸಾಧನೆ ಮಾಡಿದ ಪ್ರತಿಭಾವಂತರಿಗೆ ಹತ್ತನೇ ವರ್ಷದ ವಿದ್ಯಾರ್ಥಿವೇತನ ಸಮಾರಂಭದಲ್ಲಿ ಮಾತನಾಡಿದರು. ವಿಕಾಸ್ ಭಾರತ್ ಟ್ರಸ್ಟ್ ಗೌರವಾಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ಅಧ್ಯಕ್ಷತೆ ವಹಿಸಿದ್ದರು. ಗೌರವ ಸಲಹೆಗಾರ ಚಂದ್ರಹಾಸ ಶೆಟ್ಟಿ, ಅಧ್ಯಕ್ಷ ಪ್ರದೀಪ್ ಶೆಟ್ಟಿ ಇನ್ನಾ ಹಾಗೂ ಟ್ರಸ್ಟ್ ಸದಸ್ಯರು ಉಪಸ್ಥಿತರಿದ್ದರು. ಸರ್ವಜ್ಞ ತಂತ್ರಿ ಬೆಳ್ಮಣ್ ಕಾರ್ಯಕ್ರಮ ನಿರೂಪಿಸಿದರು.

ವಿಕಾಸರತ್ನ ಪ್ರಶಸ್ತಿ ಪ್ರದಾನ

ಅಂತಾರಾಷ್ಟ್ರೀಯ ಯೋಗಪಟು ಮಾ.ಉದ್ಭವ್ ದೇವಾಡಿಗ, ಅಂತಾರಾಷ್ಟ್ರೀಯ ಪವರ್‌ಲಿಫ್ಟರ್ ಅಕ್ಷತಾ ಪೂಜಾರಿ ಬೋಳ ಅವರಿಗೆ 2024ರ ವಿಕಾಸರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶೈಕ್ಷಣಿಕ ಕ್ಷೇತ್ರದ ಸಾಧಕಿ ಯಶಸ್ವಿ ಶೆಟ್ಟಿ, ಲೆಕ್ಕಪರಿಶೋಧಕ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪ್ರಥ್ವಿ ಪೂಜಾರಿ, ಪಿಎಚ್.ಡಿ ಪದವಿ ಪಡೆದ ಸೌರಭ್ ತಂತ್ರಿ ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net