More

    ಶಾಲೆಯಿಂದ ಹೊರಗುಳಿದವರಿಗೂ ಅಲ್ಬೆಂಡಜೋಲ್ ಮಾತ್ರೆ ನೀಡಲು ಸೂಚನೆ

    ಕೊಪ್ಪಳ: ಶಾಲೆಯಿಂದ ಹೊರಗುಳಿದ ಮಕ್ಕಳಿಗೂ ಅಲ್ಬೆಂಡಜೋಲ್ ಮಾತ್ರೆ ನೀಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಪ್ರಯುಕ್ತ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಫೆ.10ರಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಆಚರಿಸಲಾಗುತ್ತಿದೆ. ಜಂತುಹುಳು ನಿವಾರಣಾ ಮಾತ್ರೆಯನ್ನು 1 ರಿಂದ 19 ವರ್ಷದೊಳಗಿನ ಎಲ್ಲ ಶಾಲಾ ಮಕ್ಕಳಿಗೆ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಅಥವಾ ಆಶಾ ಕಾರ್ಯಕರ್ತೆಯರು ನೀಡಬೇಕು. ಮಕ್ಕಳು ಮಾತ್ರೆಯನ್ನು ಮನೆಗೆ ತೆಗೆದುಕೊಂಡು ಹೋಗದಂತೆ ಎಚ್ಚರ ವಹಿಸಿ. ಶಿಕ್ಷಣ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ, ತಾಂತ್ರಿಕ ಶಿಕ್ಷಣ ಇಲಾಖೆಗಳು ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಔಷಧ ನುಂಗಿಸಲು ತರಬೇತಿ ಅಥವಾ ಪ್ರತಿಕೂಲ ಸನ್ನಿವೇಶ ನಿರ್ವಹಣೆಯ ಬಗ್ಗೆ ತಿಳಿವಳಿಕೆ ನೀಡಿ. ಶಾಲೆಗಳಲ್ಲಿನ ಮಕ್ಕಳಷ್ಟೇ ಅಲ್ಲದೆ, ಗೈರು ಹಾಜರಾದ ಹಾಗೂ ಶಾಲೆಯಿಂದ ಹೊರಗುಳಿದ ಮಕ್ಕಳು ಮಾತ್ರೆ ನುಂಗುವಂತೆ ಕ್ರಮ ಕೈಗೊಳ್ಳುವಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

    ಜಂತುಹುಳುಗಳ ಕುರಿತು ಅನುಸರಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಅಗತ್ಯ ಚಿಕಿತ್ಸೆಯ ಕುರಿತು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಜಂಬಯ್ಯ ಮಾಹಿತಿ ನೀಡಿದರು. ಸಭೆಯಲ್ಲಿ ಜಂತುಹುಳು ನಿವಾರಣೆ ಕಾರ್ಯಕ್ರಮದ ಕುರಿತು ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಲಿಂಗರಾಜ, ಡಾ. ಮಹೇಶ, ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ಎಸ್.ಕೆ. ದೇಸಾಯಿ, ಜಿಲ್ಲಾ ಮಕ್ಕಳ ರಕ್ಷಣಾ ಯೋಜನಾಧಿಕಾರಿ ಹರೀಶ್ ಜೋಗಿ ಸೇರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts