More

    ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಣೆ


    ಮಡಿಕೇರಿ: ವಿದ್ಯಾರ್ಥಿಗಳು ಶಾಲೆಗೆ ತಪ್ಪದೆ ಹಾಜರಾಗುವ ಮೂಲಕ ಕಲಿಕಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮೂಕೊಂಡ ವಿಜು ಸುಬ್ರಮಣಿ ಕಿವಿಮಾತು ಹೇಳಿದರು.


    ಸಿದ್ದಾಪುರದ ಚೆನ್ನಂಗಿ ಸರ್ಕಾರಿ ಶಾಲೆಯ 43 ವಿದ್ಯಾರ್ಥಿಗಳಿಗೆ ಶಾಲಾ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಶಾಲಾ ಬ್ಯಾಗ್‌ಗಳನ್ನು ವಿತರಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಸೇರಿದಂತೆ ನಾನಾ ರೀತಿಯ ಸಮಸ್ಯೆಗಳಿವೆ. ಆದರೂ, ಅದೆಲ್ಲವನ್ನೂ ಧೈರ್ಯದಿಂದ ಎದುರಿಸಿ ಮಕ್ಕಳು ವ್ಯಾಸಂಗ ಮಾಡಲು ಶಾಲೆಗೆ ಬರುವುದು ಖುಷಿಯ ಸಂಗತಿ. ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.


    ಚೆನ್ನಯ್ಯನ ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೇಕೆರಿರಾ ಅರುಣ್ ಕುಮಾರ್ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚಾಗಿ ಕಲಿಯುತ್ತಿರುವ ಶಾಲೆಗಳಿಗೆ ದಾನಿಗಳಿಂದ ಹಲವಾರು ರೀತಿಯಲ್ಲಿ ಸಹಕಾರ ದೊರೆಯುತ್ತಿದೆ. ಇನ್ನು ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳಿಸುವುದರ ಮೂಲಕ ಉತ್ತಮ ಭವಿಷ್ಯ ರೂಪಿಸಲು ಮುಂದಾಗಬೇಕು ಎಂದರು.

    ಪಾಲಿಬೆಟ್ಟದ ಸಮಾಜ ಸೇವಕ ಡಾ.ಎ.ಸಿ ಗಣಪತಿ, ಪೂಣಚ್ಚ, ಕ್ಲಸ್ಟರ್ ಸಿಆರ್‌ಪಿ ಕರುಂಬಯ್ಯ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬೇಬಿ, ಆದಿವಾಸಿ ಮುಖಂಡ ಸಿದ್ದಪ್ಪ, ಶಾಲಾ ಮುಖ್ಯಶಿಕ್ಷಕಿ ಕೆ.ಕೆ ಸುಷ್ಮಾ, ಶಿಕ್ಷಕರಾದ ಪ್ರತಿಮಾ, ಸತೀಶ್, ಮಂಜುಳಾ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts